2 ಪೂರ್ವಕಾಲ ವೃತ್ತಾಂತ 14:4 - ಪರಿಶುದ್ದ ಬೈಬಲ್4 “ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಅನುಸರಿಸಿ ಆತನ ಆಜ್ಞೆಗಳಿಗೂ ಕಟ್ಟಳೆಗಳಿಗೂ ವಿಧೇಯರಾಗಿರಿ” ಎಂದು ಆಸನು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೆಹೂದ್ಯರಿಗೆ, “ನೀವು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಗೊಳ್ಳಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವು ನಿಮ್ಮ ಪಿತೃಗಳ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಕೊಳ್ಳಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.