2 ಪೂರ್ವಕಾಲ ವೃತ್ತಾಂತ 14:9 - ಪರಿಶುದ್ದ ಬೈಬಲ್9 ಇಥಿಯೋಪಿಯಾ ದೇಶದ ಜೆರಹನು ಆಸನ ಮೇಲೆ ಯುದ್ಧಮಾಡಲು ಬಂದನು. ಅವನೊಡನೆ ಹತ್ತು ಲಕ್ಷ ಸೈನಿಕರಿದ್ದರು; ಮೂನ್ನೂರು ರಥಗಳಿದ್ದವು. ಅವನ ಸೈನ್ಯವು ಮಾರೇಷದ ತನಕ ಬಂದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು. ಅಧ್ಯಾಯವನ್ನು ನೋಡಿ |
ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು.