Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:1 - ಪರಿಶುದ್ದ ಬೈಬಲ್‌

1-2 ಓಬೇದನ ಮಗನಾದ ಅಜರ್ಯನ ಮೇಲೆ ದೇವರಾತ್ಮವು ಬಂದಿತು. ಅಜರ್ಯನು ಆಸನನ್ನು ಸಂಧಿಸಿ ಹೀಗೆ ಹೇಳಿದನು: “ಆಸನೇ, ನನ್ನ ಮಾತನ್ನು ಕೇಳು. ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವನೊಡನೆ ಇದ್ದರೆ ಆತನು ನಿಮ್ಮ ಸಂಗಡ ಇರುವನು. ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಆದರೆ ನೀವು ಆತನನ್ನು ತೊರೆದರೆ ಆತನು ನಿಮ್ಮನ್ನೂ ತೊರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಓದೇದನ ಮಗ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಓಬೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ದೇವರ ಆತ್ಮವು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:1
8 ತಿಳಿವುಗಳ ಹೋಲಿಕೆ  

ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಹೀಗೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದುಬಿಟ್ಟಿರುತ್ತಾನೆ’” ಎಂದು ಹೇಳಿದನು.


ಆಗ ಜೆಕರ್ಯನ ಮಗನಾದ ಯೆಹಜೀಯೇಲನ ಮೇಲೆ ಯೆಹೋವನ ಆತ್ಮನು ಬಂದನು. ಜೆಕರ್ಯನು ಬೆನಾಯನ ಮಗ. ಬೆನಾಯನು ಯೆಗೀಯೇಲನ ಮಗ. ಯೆಗೀಯೇಲನು ಮತ್ತನ್ಯನ ಮಗ. ಯೆಹಜೀಯೇಲನು ಲೇವಿಯನಾಗಿದ್ದನು ಮತ್ತು ಆಸಾಫನ ಸಂತತಿಯವನಾಗಿದ್ದನು.


ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.


ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.


ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಪಾಳೆಯದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು.


ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು