ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.