Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:13 - ಪರಿಶುದ್ದ ಬೈಬಲ್‌

13 ಯಾವನಾದರೂ ದೇವರಾದ ಯೆಹೋವನ ಸೇವೆಮಾಡಲು ನಿರಾಕರಿಸುವದಾದರೆ ಆ ವ್ಯಕ್ತಿಯು ಗಂಡಸಾಗಿದ್ದರೂ ಹೆಂಗಸಾಗಿದ್ದರೂ ಮುಖ್ಯವಾದವನಾಗಿದ್ದರೂ ಮುಖ್ಯವಲ್ಲದವನಾಗಿದ್ದರೂ ಕೊಲ್ಲಲ್ಪಡಬೇಕು ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, “ತಮ್ಮಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಭಕ್ತಿಯನ್ನು ತೊರೆದುಬಿಡುವವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನು ಕೊಲ್ಲಲಾಗುವುದು” ಎಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಮ್ಮಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲುವೆವೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:13
16 ತಿಳಿವುಗಳ ಹೋಲಿಕೆ  

“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.


ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.


ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.


ಇಲ್ಲಿರುವ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಯಾವ ಗೋತ್ರದವರಾಗಲಿ ನಿಮ್ಮ ದೇವರಾದ ಯೆಹೋವನನ್ನು ಬಿಟ್ಟುಹೋಗದಂತೆ ನೋಡಿಕೊಳ್ಳಿರಿ. ಯಾವನೂ ಹೋಗಿ ಬೇರೆ ಜನಾಂಗಗಳ ದೇವರುಗಳ ಸೇವೆಮಾಡಬಾರದು. ಅಂಥದ್ದನ್ನು ಮಾಡುವ ಜನರು ಕಹಿಯಾದ ಮತ್ತು ವಿಷಭರಿತವಾದ ಹಣ್ಣನ್ನು ಬಿಡುವ ಗಿಡದಂತಿದ್ದಾರೆ.


ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.


ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ಸಮಾಧಿಯಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲ; ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.


ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.


ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು.


ಆಮೇಲೆ ಆಸನೂ ಅವನ ಜನರೂ ದೇವರಿಗೆ ಪ್ರಮಾಣಮಾಡಿ ಸಂತೋಷದಿಂದ ಹರ್ಷಧ್ವನಿ ಮಾಡಿದರು. ಅಲ್ಲದೆ ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿದರು.


“ಪಶುಸಂಗ ಮಾಡಿದವನಿಗೆ ಮರಣದಂಡನೆಯಾಗಬೇಕು.


ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು