Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:14 - ಪರಿಶುದ್ದ ಬೈಬಲ್‌

14 ಆಮೇಲೆ ಆಸನೂ ಅವನ ಜನರೂ ದೇವರಿಗೆ ಪ್ರಮಾಣಮಾಡಿ ಸಂತೋಷದಿಂದ ಹರ್ಷಧ್ವನಿ ಮಾಡಿದರು. ಅಲ್ಲದೆ ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತುತ್ತೂರಿ ಕೊಂಬುಗಳನ್ನು ಊದಿಸಿ, ದೊಡ್ಡ ಘೋಷಣೆಗಳೊಡನೆ, ವಾಗ್ದಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತುತೂರಿಕೊಂಬುಗಳನ್ನೂದಿಸಿ ದೊಡ್ಡ ಆರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮಹಾಶಬ್ದದಿಂದಲೂ, ಆರ್ಭಟದಿಂದಲೂ, ತುತೂರಿಗಳ ಶಬ್ದದಿಂದಲೂ, ಕೊಂಬುಗಳ ಶಬ್ದದಿಂದಲೂ ಯೆಹೋವ ದೇವರ ಮುಂದೆ ಆಣೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:14
9 ತಿಳಿವುಗಳ ಹೋಲಿಕೆ  

ನಂತರ ನಾನು ನನ್ನ ಉಡುಪಿನ ನೆರಿಗೆಯನ್ನು ಝಾಡಿಸಿ, “ತಾನು ಮಾಡಿದ ಪ್ರತಿಜ್ಞೆಯಂತೆ ನಡೆಯದವನನ್ನು ದೇವರು ಅವನ ಮನೆಯಿಂದ ಝಾಡಿಸಿಬಿಡಲಿ; ಅವನು ತಾನು ಗಳಿಸಿದ್ದೆಲ್ಲವನ್ನು ಕಳೆದುಕೊಳ್ಳಲಿ” ಎಂದು ಹೇಳಿದಾಗ ಜನರೆಲ್ಲರೂ “ಆಮೆನ್” ಅಂದರು; ಯೆಹೋವನನ್ನು ಸ್ತುತಿಸಿದರು. ತಾವು ಮಾಡಿದ ಪ್ರತಿಜ್ಞೆಯಂತೆ ನಡೆದುಕೊಂಡರು.


ಯಾವನಾದರೂ ದೇವರಾದ ಯೆಹೋವನ ಸೇವೆಮಾಡಲು ನಿರಾಕರಿಸುವದಾದರೆ ಆ ವ್ಯಕ್ತಿಯು ಗಂಡಸಾಗಿದ್ದರೂ ಹೆಂಗಸಾಗಿದ್ದರೂ ಮುಖ್ಯವಾದವನಾಗಿದ್ದರೂ ಮುಖ್ಯವಲ್ಲದವನಾಗಿದ್ದರೂ ಕೊಲ್ಲಲ್ಪಡಬೇಕು ಎಂಬುದಾಗಿ ಹೇಳಿದರು.


ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕೆಂದರೆ ಅವರು ತಮ್ಮ ಪೂರ್ಣ ಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.


ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ!


ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.


ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.


ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು