Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:15 - ಪರಿಶುದ್ದ ಬೈಬಲ್‌

15 ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕೆಂದರೆ ಅವರು ತಮ್ಮ ಪೂರ್ಣ ಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ಪ್ರಮಾಣದ ನಿವಿುತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾಕಡೆಗಳಲ್ಲಿಯೂ ಸಮಾಧಾನವನ್ನನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:15
31 ತಿಳಿವುಗಳ ಹೋಲಿಕೆ  

ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದ್ದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು.


ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.


ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ.


ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.


ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.


ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.


ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.


ಜ್ಞಾನವು ನಿನ್ನ ಜೀವನವನ್ನು ಸುಖಕರವನ್ನಾಗಿ ಮಾಡುತ್ತದೆ; ಸಮಾಧಾನವನ್ನು ಬರಮಾಡುತ್ತದೆ.


ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.


ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.


ಒಂದು ದೇಶವು ಇನ್ನೊಂದು ದೇಶವನ್ನು ನಾಶಮಾಡುತ್ತಿತ್ತು; ಒಂದು ಪಟ್ಟಣವು ಇನ್ನೊಂದು ಪಟ್ಟಣವನ್ನು ಸೂರೆಮಾಡುತ್ತಿತ್ತು. ಹೀಗೆ ದೇವರು ಎಲ್ಲಾ ಬಗೆಯ ತೊಂದರೆಗಳಿಂದ ಅವರನ್ನು ತಳಮಳಗೊಳಿಸಿದನು.


ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.


ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ.


ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.


ಆ ಕಾಲದಲ್ಲಿ ಆಸನು ಯೆಹೂದ ಪ್ರಾಂತ್ಯದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಆಸನ ಆಳ್ವಿಕೆಯಲ್ಲಿ ಯುದ್ಧವೇ ಇರಲಿಲ್ಲ. ಯಾಕೆಂದರೆ ಯೆಹೋವನು ಅವನಿಗೆ ಸಮಾಧಾನವನ್ನು ಅನುಗ್ರಹಿಸಿದ್ದನು.


ಆಮೇಲೆ ಆಸನೂ ಅವನ ಜನರೂ ದೇವರಿಗೆ ಪ್ರಮಾಣಮಾಡಿ ಸಂತೋಷದಿಂದ ಹರ್ಷಧ್ವನಿ ಮಾಡಿದರು. ಅಲ್ಲದೆ ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿದರು.


ಆದ್ದರಿಂದ ಯೆಹೋಷಾಫಾಟನ ರಾಜ್ಯದಲ್ಲಿ ಸಮಾಧಾನ ನೆಲೆಸಿತ್ತು. ಅವನ ಸುತ್ತಮುತ್ತಲೂ ಯೆಹೋವನು ಶಾಂತಿಯನ್ನು ಅನುಗ್ರಹಿಸಿದನು.


ನಾನು ಪೂರ್ಣಹೃದಯದಿಂದ ದೇವರ ಸೇವೆಮಾಡುವೆ; ದೇವರೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನಗೆ ಸಹಾಯಮಾಡು.


ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.


ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.


ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.


ಯೆಹೋವನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಆತನ ದರ್ಶನಕ್ಕಾಗಿ ಬರುವವರೇ, ಸಂತೋಷಪಡಿರಿ.


ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು