Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:4 - ಪರಿಶುದ್ದ ಬೈಬಲ್‌

4 ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಕೊಂಡರು; ಹುಡುಕಿದಾಗ ಸರ್ವೇಶ್ವರ ಅವರಿಗೆ ಸಿಕ್ಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:4
15 ತಿಳಿವುಗಳ ಹೋಲಿಕೆ  

ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.


ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕೆಂದರೆ ಅವರು ತಮ್ಮ ಪೂರ್ಣ ಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ: “ನನ್ನನ್ನು ಹುಡುಕದೆ ಇದ್ದ ಜನರು ನನ್ನನ್ನು ಕಂಡುಕೊಂಡರು. ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.”


ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು.


ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.


“ಒಳ್ಳೆಯವರಾಗಿ ಜೀವಿಸಲು ಬಹಳವಾಗಿ ಪ್ರಯತ್ನಿಸುತ್ತಿರುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ. ನಿಮ್ಮ ಪಿತೃವಾದ ಅಬ್ರಹಾಮನನ್ನೇ ದೃಷ್ಟಿಸಿ ನೋಡಿರಿ; ಆ ಬಂಡೆಯೊಳಗಿಂದಲೇ ನೀವು ತೆಗೆಯಲ್ಪಟ್ಟಿದ್ದೀರಿ.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ಆದ್ದರಿಂದ ನಿನ್ನ ಜನರಿಗೆ ನೀನು ಈ ವಿಷಯಗಳನ್ನು ತಿಳಿಸಬೇಕು. ಯೆಹೋವನು ಹೇಳುವುದೇನೆಂದರೆ, “ನನ್ನ ಬಳಿಗೆ ಹಿಂದಿರುಗಿರಿ. ಆಗ ನಾನು ನಿಮ್ಮ ಬಳಿಗೆ ಹಿಂದಿರುಗುವೆನು” ಇದು ಸರ್ವಶಕ್ತನಾದ ಯೆಹೋವನ ಮಾತುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು