2 ಪೂರ್ವಕಾಲ ವೃತ್ತಾಂತ 15:6 - ಪರಿಶುದ್ದ ಬೈಬಲ್6 ಒಂದು ದೇಶವು ಇನ್ನೊಂದು ದೇಶವನ್ನು ನಾಶಮಾಡುತ್ತಿತ್ತು; ಒಂದು ಪಟ್ಟಣವು ಇನ್ನೊಂದು ಪಟ್ಟಣವನ್ನು ಸೂರೆಮಾಡುತ್ತಿತ್ತು. ಹೀಗೆ ದೇವರು ಎಲ್ಲಾ ಬಗೆಯ ತೊಂದರೆಗಳಿಂದ ಅವರನ್ನು ತಳಮಳಗೊಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಒಂದು ಜನಾಂಗ ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳುಮಾಡುತ್ತಿದ್ದರು. ದೇವರು ನಾನಾ ತರದ ಕಷ್ಟದಿಂದ ಅವರನ್ನು ತಳಮಳಗೊಳಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರದ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದನು. ನೀವಾದರೋ ಸ್ಥಿರಚಿತ್ತರಾಗಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜನಾಂಗವು ಜನಾಂಗದಿಂದಲೂ, ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ದೇವರು ಸಕಲ ಇಕ್ಕಟ್ಟುಗಳಿಂದ ಅವರನ್ನು ತೊಂದರೆಪಡಿಸಿದರು. ಅಧ್ಯಾಯವನ್ನು ನೋಡಿ |
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.