2 ಪೂರ್ವಕಾಲ ವೃತ್ತಾಂತ 15:8 - ಪರಿಶುದ್ದ ಬೈಬಲ್8 ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದುಹಾಕಿಸಿದನು. ದೇವಾಲಯದ ಮಂಟಪದೆದುರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಸನು ಓಬೇದನ [ಮಗನಾದ ಅಜರ್ಯನ] ಈ ಪ್ರವಾದನೋಕ್ತಿಗಳನ್ನು ಕೇಳಿದಾಗ ಧೈರ್ಯಗೊಂಡು ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದುಹಾಕಿ ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಆತನ ಯಜ್ಞವೇದಿಯನ್ನು ಜೀರ್ಣೋದ್ಧಾರಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು. ಅಧ್ಯಾಯವನ್ನು ನೋಡಿ |
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”
ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.