Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:1 - ಪರಿಶುದ್ದ ಬೈಬಲ್‌

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರೇಲಿನ ರಾಜನಾದ ಬಾಷನು ಆಸನ ಸಂಗಡ ಯುದ್ಧಕ್ಕೆ ಹೊರಟನು. ಅವನು ರಾಮ ಎಂಬ ಪಟ್ಟಣವನ್ನು ಕೋಟೆಯನ್ನಾಗಿ ಪರಿವರ್ತಿಸಿ, ಯೆಹೂದದ ರಾಜನಾದ ಆಸನ ಬಳಿಗೆ ಹೋಗುವುದಕ್ಕಾಗಲಿ ಬರುವುದಕ್ಕಾಗಲಿ ಯಾರಿಗೂ ಆಗದಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಯೇಲ್ ರಾಜ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿಬರುವುದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಸನ ಆಳಿಕೆಯ ಮೂವತ್ತಾರನೆಯ ವರುಷದಲ್ಲಿ ಇಸ್ರಾಯೇಲ್‍ರಾಜನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಬಂದು ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು, ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಪಟ್ಟಣದ ಸುತ್ತಲೂ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:1
9 ತಿಳಿವುಗಳ ಹೋಲಿಕೆ  

ಆಮೇಲೆ ಆಸನು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದ ಜನರನ್ನೆಲ್ಲಾ ಒಟ್ಟಾಗಿ ಸೇರಿಸಿದನು. ಅದೇ ಪ್ರಕಾರ ಅವನು ಇಸ್ರೇಲನ್ನು ಬಿಟ್ಟು ಯೆಹೂದದಲ್ಲಿ ನೆಲೆಸಲು ಬಂದಿದ್ದ ಎಫ್ರಾಯೀಮ್, ಮನಸ್ಸೆ ಮತ್ತು ಸಿಮೆಯೋನ್ ಪ್ರಾಂತ್ಯಗಳವರನ್ನೂ ಒಟ್ಟಾಗಿ ಸೇರಿಸಿದನು. ದೇವರಾದ ಯೆಹೋವನು ಆಸನ ಕೂಡ ಇರುವದನ್ನು ನೋಡಿ ಅವನೊಂದಿಗೆ ಸೇರಲು ಅನೇಕ ಜನರು ಬಂದಿದ್ದರು.


ಆ ಕಷ್ಟದ ಸಮಯದಲ್ಲಿ ಯಾರೂ ಸುರಕ್ಷಿತವಾಗಿ ಪ್ರಯಾಣ ಮಾಡುವಂತಿರಲಿಲ್ಲ. ಎಲ್ಲಾ ದೇಶಗಳಲ್ಲಿಯೂ ಕಷ್ಟ ತೊಂದರೆಗಳು ತುಂಬಿದ್ದವು.


ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದ ತನಕ ದೇಶದಲ್ಲಿ ಯುದ್ಧವೇ ಇರಲಿಲ್ಲ.


ಆಗ ಆಸನು ದೇವಾಲಯದಲ್ಲಿಯೂ ಅರಮನೆಯಲ್ಲಿಯೂ ಶೇಖರಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೆಲ್ಲಾ ಒಟ್ಟಾಗಿ ಸೇರಿಸಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಈ ಸಂದೇಶದೊಡನೆ ಕಳುಹಿಸಿದನು,


ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.


ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು