2 ಪೂರ್ವಕಾಲ ವೃತ್ತಾಂತ 16:14 - ಪರಿಶುದ್ದ ಬೈಬಲ್14 ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳಧೂಪವನ್ನು ಸುಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಬುಕ್ಕಿಟ್ಟುಗಾರರ ಕಸಬಿನ ಮೇರೆಗೆ ವಿುಶ್ರಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು ಅವನು ತನಗೋಸ್ಕರ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಅವನಿಗೋಸ್ಕರ ಬಹುಧೂಪವನ್ನು ಸುಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು. ಅಧ್ಯಾಯವನ್ನು ನೋಡಿ |
ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸ್ವತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.’” ಇದು ಯೆಹೋವನ ನುಡಿ.
ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.