Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:3 - ಪರಿಶುದ್ದ ಬೈಬಲ್‌

3 “ಬೆನ್ಹದದನೇ, ನಮ್ಮೊಂದಿಗೆ ಒಂದು ಒಪ್ಪಂದವಿರಲಿ. ನನ್ನ ತಂದೆಯೂ ನಿನ್ನ ತಂದೆಯೂ ಮಾಡಿದ್ದ ಒಪ್ಪಂದವನ್ನು ನಾವು ಮುಂದುವರಿಸೋಣ. ನೋಡು, ನಾನೀಗ ನಿನಗೆ ಬೆಳ್ಳಿಬಂಗಾರಗಳನ್ನು ಕಳುಹಿಸುತ್ತಿದ್ದೇನೆ. ನೀನೀಗ ಇಸ್ರೇಲಿನ ರಾಜನಾದ ಬಾಷನೊಡನೆ ಮಾಡಿದ್ದ ಒಪ್ಪಂದವನ್ನು ಮುರಿದುಹಾಕು. ಆಗ ಅವನು ನನಗೆ ತೊಂದರೆ ಕೊಡುವುದನ್ನು ನಿಲ್ಲಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಪ್ಪಂದ ಇದೆಯಲ್ಲಾ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ: ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದ ಇದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಯೇಲರ ಅರಸ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಿರುತ್ತದಲ್ಲಾ; ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಾಯೇಲ್ಯರ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:3
16 ತಿಳಿವುಗಳ ಹೋಲಿಕೆ  

ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.


ಇತರರನ್ನು ಪ್ರೀತಿಸದವರಾಗಿರುತ್ತಾರೆ; ಕ್ಷಮಿಸದವರಾಗಿರುತ್ತಾರೆ; ದೂಷಿಸುವವರಾಗಿರುತ್ತಾರೆ. ತಮ್ಮ ಮೇಲೆ ತಮಗೇ ಹತೋಟಿಯಿಲ್ಲದವರಾಗಿರುತ್ತಾರೆ; ಉತ್ತಮವಾದದ್ದನ್ನು ದ್ವೇಷಿಸುವವರಾಗಿರುತ್ತಾರೆ; ಕೋಪಿಷ್ಠರಾಗಿರುತ್ತಾರೆ; ಸಂಕುಚಿತ ಗುಣವುಳ್ಳವರಾಗಿರುತ್ತಾರೆ.


ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.”


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್‌ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು, ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು.


(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.


ಆದರೆ ಅದಕ್ಕೆ ಪ್ರತಿಯಾಗಿ ನೀವು ಈ ಪ್ರದೇಶದಲ್ಲಿ ವಾಸಮಾಡುತ್ತಿರುವ ಜನಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬಾರದು. ಅವರ ಯಜ್ಞವೇದಿಕೆಗಳನ್ನು ನಾಶಮಾಡಬೇಕು’ ಎಂದು ನಾನು ನಿಮಗೆ ಹೇಳಿದ್ದೆ. ಆದರೆ ನೀವು ನನಗೆ ವಿಧೇಯರಾಗಲಿಲ್ಲ.


ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.


ರಾಜನಾದ ಆಸನು ಯೆಹೂದದ ಅರಸನಾಗಿದ್ದ ಕಾಲದಲ್ಲಿ ಅವನಿಗೆ ಮತ್ತು ಇಸ್ರೇಲಿನ ರಾಜನಾದ ಬಾಷನಿಗೆ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಆಗ ಆಸನು ದೇವಾಲಯದಲ್ಲಿಯೂ ಅರಮನೆಯಲ್ಲಿಯೂ ಶೇಖರಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೆಲ್ಲಾ ಒಟ್ಟಾಗಿ ಸೇರಿಸಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಈ ಸಂದೇಶದೊಡನೆ ಕಳುಹಿಸಿದನು,


ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು