6 ಆಗ ಆಸನೂ ಇಸ್ರೇಲಿನ ಎಲ್ಲಾ ಜನರೂ ಒಟ್ಟಿಗೆ ರಾಮಕ್ಕೆ ಹೋಗಿ ಅಲ್ಲಿ ಬಾಷನು ಕೋಟೆಕಟ್ಟಲು ತಂದಿಟ್ಟಿದ್ದ ಕಲ್ಲುಮರಗಳನ್ನೆಲ್ಲಾ ತೆಗೆದು ಮಿಚ್ಪ ಮತ್ತು ಗೆಬ ಪಟ್ಟಣಗಳನ್ನು ಭದ್ರಪಡಿಸಿದರು.
6 ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
6 ಅನಂತರ ಅರಸ ಆಸನು ಎಲ್ಲಾ ಯೆಹೂದ್ಯರನ್ನು ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
6 ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರಿಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರವಾಗಿ ತೆಗೆದುಕೊಂಡುಹೋಗಿ ಗೆಬ, ವಿುಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
6 ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡು ಹೋದನು. ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ, ಅವುಗಳಿಂದ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.
ಅವರು ಬಂದು ಯೆಹೂದದೇಶದ ಮೇಲೆ ಆಕ್ರಮಣ ಮಾಡಿದರು; ರಾಜನಿವಾಸದಲ್ಲಿದ್ದ ನಿಕ್ಷೇಪವನ್ನೆಲ್ಲಾ ಸೂರೆಮಾಡಿದರು. ಅಲ್ಲದೆ ಯೆಹೋರಾಮನ ಪತ್ನಿ, ಮಕ್ಕಳನ್ನೂ ಕೊಂಡೊಯ್ದರು. ಯೆಹೋರಾಮನ ಕೊನೆಯ ಮಗನು ಮಾತ್ರ ಉಳಿದನು. ಅವನ ಹೆಸರು ಯೆಹೋವಾಹಾಜ.
ಬೆನ್ಯಾಮೀನ್ ಕುಲದ ಪ್ರಾಂತ್ಯದಿಂದ ಗಿಬೆಯೋನ್, ಗೆಬಾ, ಅಲೆಮೆತ್ ಮತ್ತು ಅನಾತೋತ್ ಪಟ್ಟಣಗಳೂ ಅದರ ಸುತ್ತಮುತ್ತಲಿದ್ದ ಹೊಲಗಳೂ ಅವರಿಗೆ ದೊರೆತವು. ಒಟ್ಟು ಹದಿಮೂರು ಪಟ್ಟಣಗಳನ್ನು ಕೆಹಾತ್ಯನ ಕುಲದವರಿಗೆ ಕೊಡಲ್ಪಟ್ಟಿತು.
ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.
ಇಸ್ರೇಲಿನಲ್ಲಿ ನ್ಯಾಯಪರಿಪಾಲನೆಗಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್ ಮತ್ತು ಮಿಚ್ಪೆ ಎಂಬ ಪಟ್ಟಣಗಳಿಗೆ ಹೋದನು. ಹೀಗೆ ಅವನು ಈ ಸ್ಥಳಗಳಲ್ಲೆಲ್ಲಾ ಇಸ್ರೇಲರಿಗೆ ನ್ಯಾಯತೀರಿಸುತ್ತಾ ಅವರನ್ನು ಆಳಿದನು.
ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.
ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸವನ್ನಿಡುವ ಬದಲು ಅರಾಮ್ಯರ ಅರಸನ ಮೇಲೆ ಭರವಸವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.