Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:10 - ಪರಿಶುದ್ದ ಬೈಬಲ್‌

10 ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರಿಗೆ ಯೆಹೋವನ ಭಯವಿದ್ದದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:10
10 ತಿಳಿವುಗಳ ಹೋಲಿಕೆ  

ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


“ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚೆಚ್ಚಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.


ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.


ಯೆಹೋವನು ಇಸ್ರೇಲರ ವೈರಿಗಳಿಗೆ ವಿರುದ್ಧವಾಗಿ ಯುದ್ಧ ಮಾಡಿದನೆಂದು ಕೇಳಿ ಎಲ್ಲಾ ದೇಶಗಳವರು ಆತನಿಗೆ ಭಯಪಟ್ಟರು.


ಆಸನ ಸೈನಿಕರು ಇಥಿಯೋಪಿಯಾದ ಸೈನ್ಯವನ್ನು ಗೆರಾರಿನ ತನಕ ಹಿಂದಟ್ಟಿಕೊಂಡು ಹೋದರು. ಅವರು ಮತ್ತೆ ಸೈನ್ಯವನ್ನು ಕಟ್ಟಿ ಯುದ್ಧಮಾಡಲು ಸಾಧ್ಯವಾಗದಷ್ಟು ಸೈನಿಕರು ಸತ್ತರು. ಅವರ ಬಲವನ್ನು ಮುರಿಯಲು ಯೆಹೋವನು ತನ್ನ ಸೈನ್ಯವನ್ನು ಬಳಸಿಕೊಂಡನು.


ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು. ಭಯದಿಂದ ನಡುಗುವರು. ಅವರು ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ಅವರು ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು