2 ಪೂರ್ವಕಾಲ ವೃತ್ತಾಂತ 17:3 - ಪರಿಶುದ್ದ ಬೈಬಲ್3 ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕೆಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೇ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವನು ಬಾಳ್ ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಯೆಹೋಷಾಫಾಟನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಬಾಳ್‍ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವನು ಬಾಳ್‍ದೇವರುಗಳನ್ನು ಅವಲಂಬಿಸದೆ ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಇವನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿ |
ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.
ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.
ಆ ಬಳಿಕ ಯೇಹು ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವದನ್ನು ಕಂಡ ಯೇಹುವಿನ ಸಂಗಡಿಗರು ಅವನನ್ನು ಹಿಡಿದು ಯೇಹುವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. ಅವರು, “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.