2 ಪೂರ್ವಕಾಲ ವೃತ್ತಾಂತ 17:4 - ಪರಿಶುದ್ದ ಬೈಬಲ್4 ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇವನು ಇಸ್ರಾಯೇಲ್ಯರಂತೆ ನಡೆಯದೆ ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು. ಅಧ್ಯಾಯವನ್ನು ನೋಡಿ |
ಆ ಬಳಿಕ ಯೇಹು ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವದನ್ನು ಕಂಡ ಯೇಹುವಿನ ಸಂಗಡಿಗರು ಅವನನ್ನು ಹಿಡಿದು ಯೇಹುವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. ಅವರು, “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.
ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.