7 ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಎಲ್ಲಾ ಪಟ್ಟಣಗಳಿಗೆ ನಾಯಕರನ್ನು ಕಳುಹಿಸಿ ಜನರಿಗೆ ದೇವರ ವಿಧಿನಿಯಮಗಳು ಬೋಧಿಸಲ್ಪಡುವಂತೆ ಮಾಡಿದನು. ಆ ನಾಯಕರು ಯಾರೆಂದರೆ: ಬೆನ್ಹೈಲ್, ಓಬದ್ಯ, ಜೆಕರ್ಯನೆತನೇಲ್ ಮತ್ತು ಮೀಕಾಯ.
7 ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಹೈಲ್, ಓಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.
7 ಅವನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ, ಓಬದ್ಯನನ್ನೂ, ಜೆಕರ್ಯನನ್ನೂ, ನೆತನೆಯೇಲನನ್ನೂ, ಮೀಕಾಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೆಕಳುಹಿಸಿದನು.
ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.
ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.
ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”
ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು.
ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.
ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.
“ಯೆಹೋವನು ನನಗೆ ಆಜ್ಞಾಪಿಸಿದ ವಿಧಿನಿಯಮಗಳನ್ನು ನಾನು ನಿಮಗೆ ಬೋಧಿಸಿದೆನು. ಈಗ ನೀವು ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿ ನೀವು ನೆಲೆಸುವಾಗ ಆ ವಿಧಿನಿಯಮಗಳನ್ನು ಅನುಸರಿಸಬೇಕೆಂದು ನಾನು ನಿಮಗೆ ಬೋಧಿಸಿದೆನು.
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.