2 ಪೂರ್ವಕಾಲ ವೃತ್ತಾಂತ 17:9 - ಪರಿಶುದ್ದ ಬೈಬಲ್9 ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇವರು ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇವರು ಸರ್ವೇಶ್ವರನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಜುದೇಯ ನಾಡಿನಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇವರು ಯೆಹೋವಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಯೆಹೋವ ದೇವರ ನಿಯಮದ ಗ್ರಂಥ ಇತ್ತು. ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ, ಜನರಿಗೆ ಬೋಧಿಸಿದರು. ಅಧ್ಯಾಯವನ್ನು ನೋಡಿ |
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.
ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.