ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.
ಮೀಕಾಯೆಹುವಿನ ಬಳಿಗೆ ಹೋದ ರಾಜನ ಸೇವಕನು ಅವನಿಗೆ, “ಮೀಕಾಯೆಹುವೇ ಕೇಳು, ಎಲ್ಲಾ ಪ್ರವಾದಿಗಳೂ ರಾಜನು ಗೆಲ್ಲುವನು ಎಂದು ಪ್ರವಾದಿಸುತ್ತಿದ್ದಾರೆ. ಅದನ್ನೇ ನೀನು ಹೇಳಿ ಅರಸನಿಗೆ ಶುಭವನ್ನು ಹಾರೈಸಬೇಕು” ಅಂದನು.
ಆಗ ಅಹಾಬನು ನಾನೂರು ಮಂದಿ ಪ್ರವಾದಿಗಳನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಾವು ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬೇಕೋ ಬೇಡವೋ?” ಎಂದು ಕೇಳಿದಾಗ ಆ ಪ್ರವಾದಿಗಳು ಅಹಾಬನಿಗೆ, “ಹೋಗು, ದೇವರು ರಾಮೋತ್‌ಗಿಲ್ಯಾದನ್ನು ಸೋಲಿಸುವಂತೆ ಮಾಡುವನು” ಎಂದು ಹೇಳಿದರು.
ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.