Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:12 - ಪರಿಶುದ್ದ ಬೈಬಲ್‌

12 ಮೀಕಾಯೆಹುವಿನ ಬಳಿಗೆ ಹೋದ ರಾಜನ ಸೇವಕನು ಅವನಿಗೆ, “ಮೀಕಾಯೆಹುವೇ ಕೇಳು, ಎಲ್ಲಾ ಪ್ರವಾದಿಗಳೂ ರಾಜನು ಗೆಲ್ಲುವನು ಎಂದು ಪ್ರವಾದಿಸುತ್ತಿದ್ದಾರೆ. ಅದನ್ನೇ ನೀನು ಹೇಳಿ ಅರಸನಿಗೆ ಶುಭವನ್ನು ಹಾರೈಸಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇತ್ತ ಮೀಕಾಯೆಹುವನ್ನು ಕರೆಯಲು ಬಂದಿದ್ದ ದೂತನು, “ನೋಡಿ ಎಲ್ಲ ಪ್ರವಾದಿಗಳು ಏಕ ಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ. ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೀಕಾಯೆಹುವನ್ನು ಕರೆಯುವದಕ್ಕೆ ಹೋದ ದೂತನು ಅವನಿಗೆ - ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:12
11 ತಿಳಿವುಗಳ ಹೋಲಿಕೆ  

ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.


ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.


ಅವರ ದುಷ್ಟತನವು ಅವರ ಅರಸರನ್ನು ಸಂತಸಗೊಳಿಸುತ್ತದೆ. ಅವರ ಸುಳ್ಳುಗಳು ಅವರ ನಾಯಕರನ್ನು ಸಂತೋಷಪಡಿಸುತ್ತವೆ.


ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ನೀನಾದರೋ, ‘ದೇವರಿಗೆ ಗೊತ್ತಿರುವುದೇನು? ಕಾರ್ಮೋಡಗಳ ಆಚೆಯಿಂದ ನಮಗೆ ನ್ಯಾಯತೀರಿಸಬಲ್ಲನೇ?


ಈ ಎಲ್ಲ ಅರಸರು ಒಂದು ಕಡೆ ಸೇರಿದರು. ಅವರು ಯೆಹೋಶುವನ ಮತ್ತು ಇಸ್ರೇಲರ ವಿರುದ್ಧ ಯುದ್ಧ ಮಾಡುವ ಯೋಜನೆಗಳನ್ನು ಹಾಕಿಕೊಂಡರು.


ಅಲ್ಲಿದ್ದ ಪ್ರವಾದಿಗಳೆಲ್ಲರೂ ಅದನ್ನೇ ನುಡಿದರು. ಅವರು, “ನೀನು ರಾಮೋತ್‌ಗಿಲ್ಯಾದಿಗೆ ಹೋಗು. ನಿನಗಲ್ಲಿ ಜಯವಾಗುವದು. ಯೆಹೋವನು ಅರಾಮ್ಯರನ್ನು ಸೋಲಿಸುವಂತೆ ನಿನಗೆ ಸಹಾಯಮಾಡುವನು” ಎಂದರು.


ಆದರೆ ಮೀಕಾಯೆಹುವು, “ಯೆಹೋವನಾಣೆ, ಆತನು ಹೇಳಿದ್ದನ್ನೇ ನಾನು ಹೇಳುವೆನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು