2 ಪೂರ್ವಕಾಲ ವೃತ್ತಾಂತ 18:14 - ಪರಿಶುದ್ದ ಬೈಬಲ್14 ಮೀಕಾಯೆಹುವು ಅಹಾಬನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬಹುದೋ?” ಎಂದು ವಿಚಾರಿಸಿದಾಗ ಮೀಕಾಯೆಹುವು, “ಹೋಗಿ, ಯುದ್ಧಮಾಡು. ದೇವರು ಅವರನ್ನು ನಿನ್ನ ಕೈಗಳಿಗೆ ಒಪ್ಪಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವನು “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶವಾಗುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶರಾಗುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು. ಅಧ್ಯಾಯವನ್ನು ನೋಡಿ |
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
ಮಧ್ಯಾಹ್ನವಾದಾಗ ಎಲೀಯನು ಅವರನ್ನು ಅಪಹಾಸ್ಯ ಮಾಡಲಾರಂಭಿಸಿದನು. ಎಲೀಯನು, “ಬಾಳನು ನಿಜವಾದ ದೇವರಾಗಿದ್ದರೆ, ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ! ಬಹುಶಃ ಅವನು ಯೋಚನಾನಿರತನಾಗಿರಬಹುದು! ಅಥವಾ ಕಾರ್ಯನಿರತನಾಗಿರಬಹುದು! ಅಥವಾ ಸಂಚಾರನಿರತನಾಗಿರಬಹುದು! ಅಥವಾ ನಿದ್ರಾಮಗ್ನನಾಗಿರಬಹುದು! ನೀವು ಮತ್ತಷ್ಟು ಗಟ್ಟಿಯಾಗಿ ಪ್ರಾರ್ಥಿಸಿ, ಅವನನ್ನು ಎಚ್ಚರಗೊಳಿಸಿ!” ಎಂದು ಹೇಳಿದನು.