ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು.
ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.
ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.
ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.
ಮೀಕಾಯೆಹುವು ಅಹಾಬನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬಹುದೋ?” ಎಂದು ವಿಚಾರಿಸಿದಾಗ ಮೀಕಾಯೆಹುವು, “ಹೋಗಿ, ಯುದ್ಧಮಾಡು. ದೇವರು ಅವರನ್ನು ನಿನ್ನ ಕೈಗಳಿಗೆ ಒಪ್ಪಿಸುವನು” ಎಂದು ಹೇಳಿದನು.
“ಇಸ್ರೇಲಿನ ಜನರೆಲ್ಲರೂ ಬೆಟ್ಟಪ್ರದೇಶಗಳಲ್ಲಿ ಚದರಿರುವದನ್ನು ಕಂಡೆನು. ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಕರ್ತನು ಹೇಳಿದ್ದೇನೆಂದರೆ, ‘ಅವರಿಗೆ ನಾಯಕರಿಲ್ಲ, ಆದ್ದರಿಂದ ಸುರಕ್ಷಿತವಾಗಿ ಮನೆಗೆ ಹಿಂದಿರುಗಲಿ’” ಎಂದು ಹೇಳಿದನು.