2 ಪೂರ್ವಕಾಲ ವೃತ್ತಾಂತ 18:16 - ಪರಿಶುದ್ದ ಬೈಬಲ್16 “ಇಸ್ರೇಲಿನ ಜನರೆಲ್ಲರೂ ಬೆಟ್ಟಪ್ರದೇಶಗಳಲ್ಲಿ ಚದರಿರುವದನ್ನು ಕಂಡೆನು. ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಕರ್ತನು ಹೇಳಿದ್ದೇನೆಂದರೆ, ‘ಅವರಿಗೆ ನಾಯಕರಿಲ್ಲ, ಆದ್ದರಿಂದ ಸುರಕ್ಷಿತವಾಗಿ ಮನೆಗೆ ಹಿಂದಿರುಗಲಿ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಯೊಳಗೆ ಹೋಗಲಿ ಎಂದರು,” ಎಂಬುದಾಗಿ ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು - ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು. ಅಧ್ಯಾಯವನ್ನು ನೋಡಿ |
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.