Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:2 - ಪರಿಶುದ್ದ ಬೈಬಲ್‌

2 ಕೆಲವು ವರ್ಷಗಳ ನಂತರ ಯೆಹೋಷಾಫಾಟನು ಸಮಾರ್ಯ ಪಟ್ಟಣದಲ್ಲಿ ಅಹಾಬನನ್ನು ಸಂಧಿಸಲು ಹೋದನು. ಯೆಹೋಷಾಫಾಟನಿಗೂ ಅವನೊಂದಿಗೆ ಬಂದಿದ್ದ ಜನರಿಗೂ ಅಹಾಬನು ಅನೇಕ ದನಕುರಿಗಳನ್ನು ವಧಿಸಿ ಔತಣಮಾಡಿಸಿದನು. ರಾಮೋತ್‌ಗಿಲ್ಯೋದ್ ಪಟ್ಟಣದ ಮೇಲೆ ಯುದ್ಧಮಾಡಲು ಅಹಾಬನು ಯೆಹೋಷಾಫಾಟನನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಹಾಬನು ಅವನಿಗೂ ಅವನೊಡನೆ ಬಂದ ಜನರಿಗೂ ಅನೇಕಾನೇಕ ದನಕುರಿಗಳನ್ನು ವಧಿಸಿ ಔತಣವನ್ನೇರ್ಪಡಿಸಿದನು. ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಲು ತನ್ನ ಸಂಗಡ ಬರಬೇಕೆಂದು ಅವನನ್ನು ಪ್ರೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕೆಲವು ವರುಷಗಳಾದನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದಾಗ ಅಹಾಬನು ಅವನಿಗೋಸ್ಕರವೂ ಅವನೊಡನೆ ಬಂದ ಜನರಿಗೋಸ್ಕರವೂ ಅನೇಕಾನೇಕ ದನಕುರಿಗಳನ್ನು ವಧಿಸಿ ಔತಣಮಾಡಿಸಿ ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್‍ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೆಲವು ವರ್ಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು. ಆಗ ಅಹಾಬನು ಅವನಿಗೋಸ್ಕರವೂ, ಅವನ ಸಂಗಡ ಇದ್ದ ಜನರಿಗೋಸ್ಕರವೂ ಅನೇಕ ಕುರಿದನಗಳನ್ನೂ ವಧಿಸಿ ಔತಣವನ್ನೇರ್ಪಡಿಸಿ, ತನ್ನ ಸಂಗಡ ಯುದ್ಧಕ್ಕಾಗಿ ಗಿಲ್ಯಾದಿನ ರಾಮೋತಿಗೆ ಹೋಗಲು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:2
12 ತಿಳಿವುಗಳ ಹೋಲಿಕೆ  

ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.


ಒಂದು ದಿನ, ಅದೋನೀಯನು ಎನ್‌ರೋಗೆಲಿನ ಹತ್ತಿರದ ಚೋಹೆಲೆತ್ ಎಂಬ ಬಂಡೆಯ ಬಳಿ ಕೆಲವು ಕುರಿಗಳನ್ನು, ಹಸುಗಳನ್ನು ಮತ್ತು ಕೊಬ್ಬಿದ ಕರುಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅದೋನೀಯನು ತನ್ನ ಸಹೋದರರನ್ನು (ರಾಜನ ಇತರ ಗಂಡುಮಕ್ಕಳನ್ನು) ಮತ್ತು ಯೆಹೂದದ ಅಧಿಕಾರಿಗಳನ್ನು ಆಹ್ವಾನಿಸಿದನು.


ಇದೆಲ್ಲಾ ನಡೆಯುತ್ತಿರುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ನಾನು ಬಾಬಿಲೋನಿನ ಅರಸನ ಬಳಿಗೆ ಹಿಂತಿರುಗಿದ್ದೆನು. ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅವನ ಬಳಿಗೆ ಹೋದೆನು. ಸ್ವಲ್ಪಕಾಲವಾದ ಬಳಿಕ ಅರಸನ ಅಪ್ಪಣೆಯೊಂದಿಗೆ ನಾನು ಹಿಂತಿರುಗಿ ಜೆರುಸಲೇಮಿಗೆ ಬಂದೆನು.


ಅಲ್ಲಿಯೂ ಮಳೆಯಿಲ್ಲದ್ದರಿಂದ, ಸ್ವಲ್ಪಕಾಲದ ಬಳಿಕ ಹಳ್ಳವೂ ಬತ್ತಿಹೋಯಿತು.


ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.


ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆ ಆಶ್ರಯನಗರಗಳು.


ಆ ಮೂರು ನಗರಗಳು ಯಾವುವೆಂದರೆ: ರೂಬೇನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚೆರ್; ಗಾದ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್.


ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್‌ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು, ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು