Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:21 - ಪರಿಶುದ್ದ ಬೈಬಲ್‌

21 ಅದಕ್ಕೆ ಆತ್ಮವು, ‘ನಾನು ಹೋಗಿ ಅಹಾಬನ ಪ್ರವಾದಿಗಳಿಗೆ ಸುಳ್ಳುಹೇಳುವ ಆತ್ಮವಾಗುತ್ತೇನೆ’ ಎಂದು ಹೇಳಿತು. ಅದಕ್ಕೆ ಆತನು ‘ಸರಿ, ಹಾಗೆಯೇ ಮಾಡು. ನೀನು ನಿನ್ನ ಕಾರ್ಯದಲ್ಲಿ ಸಫಲವಾಗುವೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು’, ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ ಅದಕ್ಕೆ, ‘ಹೋಗಿ ಅದರಂತೆಯೇ ಮಾಡು; ಅವನನ್ನು ಪ್ರೇರೇಪಿಸಿ ಸಫಲನಾಗುವೆ’, ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:21
13 ತಿಳಿವುಗಳ ಹೋಲಿಕೆ  

ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.


ಈ ಎರಡನೆಯ ಮೃಗವು ಅದ್ಭುತಗಳನ್ನು ಮಾಡಲು ತನಗೆ ನೀಡಿರುವ ಶಕ್ತಿಯಿಂದ ಭೂಮಿಯ ಮೇಲೆ ವಾಸಿಸುವ ಜನರನ್ನು ಮರುಳು ಗೊಳಿಸುತ್ತದೆ. ಮೊದಲನೆಯ ಮೃಗದ ಸೇವೆಯನ್ನು ಮಾಡಲು ಅದು ಈ ಅದ್ಭುತಗಳನ್ನು ಮಾಡುತ್ತದೆ. ಕತ್ತಿಯಿಂದ ಗಾಯಗೊಂಡಿದ್ದೂ ಸಾಯದೆ ಬದುಕಿದ ಮೊದಲನೆಯ ಮೃಗಕ್ಕೆ ಗೌರವ ತೋರಲು ವಿಗ್ರಹವನ್ನು ನಿರ್ಮಿಸುವಂತೆ ಅದು ಜನರಿಗೆ ಆಜ್ಞಾಪಿಸಿತು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ನಾವಾದರೋ ದೇವರಿಂದ ಬಂದವರು. ಆದ್ದರಿಂದ ದೇವರನ್ನು ಬಲ್ಲ ಜನರು ನಮಗೆ ಕಿವಿಗೊಡುತ್ತಾರೆ, ಆದರೆ ದೇವರಿಂದ ಬಂದಿಲ್ಲದ ಜನರು ನಮ್ಮ ಮಾತುಗಳನ್ನು ಕೇಳುವುದಿಲ್ಲ. ಯಾವುದು ಸತ್ಯವನ್ನು ಬೋಧಿಸುವ ಆತ್ಮ, ಯಾವುದು ಸುಳ್ಳನ್ನು ಬೋಧಿಸುವ ಆತ್ಮ ಎಂಬುದನ್ನು ಹೀಗೆ ತಿಳಿದುಕೊಳ್ಳುತ್ತೇವೆ.


ಜನರನ್ನು ಶಪಿಸುವುದೇ ಅವನಿಗೆ ಇಷ್ಟವಾಗಿತ್ತು. ಆದ್ದರಿಂದ ಆ ಶಾಪಗಳು ಅವನಿಗೇ ಸಂಭವಿಸಲಿ. ಅವನು ಜನರನ್ನು ಆಶೀರ್ವದಿಸಲೇ ಇಲ್ಲ. ಆದ್ದರಿಂದ ಅವನಿಗೆ ಒಳ್ಳೆಯದಾಗದಂತೆ ಮಾಡು.


ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು.


ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು.


“ಆದ್ದರಿಂದ ಅಹಾಬನೇ, ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳುಹೇಳುವ ಆತ್ಮವನ್ನು ಯೆಹೋವನೇ ಇರಿಸಿದ್ದಾನೆ; ನಿನಗೆ ಕೇಡಾಗುವುದೆಂದು ಯೆಹೋವನೇ ತಿಳಿಸುತ್ತಾನೆ” ಎಂದನು.


‘ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಮಾಡಲು ಅಹಾಬನನ್ನು ಯಾರು ಮರುಳುಗೊಳಿಸುವರು? ಯಾಕೆಂದರೆ ಅಲ್ಲಿ ಅವನು ಸಾಯಬೇಕು’ ಎಂದು ಯೆಹೋವನು ಕೇಳಿದಾಗ ಅಲ್ಲಿ ನಿಂತಿದ್ದವರು ಬೇರೆಬೇರೆ ವಿಧಾನವನ್ನು ತಿಳಿಸಿದರು.


ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು