Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:22 - ಪರಿಶುದ್ದ ಬೈಬಲ್‌

22 “ಆದ್ದರಿಂದ ಅಹಾಬನೇ, ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳುಹೇಳುವ ಆತ್ಮವನ್ನು ಯೆಹೋವನೇ ಇರಿಸಿದ್ದಾನೆ; ನಿನಗೆ ಕೇಡಾಗುವುದೆಂದು ಯೆಹೋವನೇ ತಿಳಿಸುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನೇ ಕಳುಹಿಸಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆದ್ದರಿಂದ ಇಗೋ, ಯೆಹೋವ ದೇವರು ಈ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:22
18 ತಿಳಿವುಗಳ ಹೋಲಿಕೆ  

ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು.


ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.


ದೇವರು ಬಲಿಷ್ಠನಾಗಿರುವುದರಿಂದ ಯಾವಾಗಲೂ ಜಯಗಳಿಸುತ್ತಾನೆ. ಗೆಲ್ಲುವವರೂ ಸೋಲುವವರೂ ಆತನವರೇ!


ಅದಕ್ಕಾಗಿಯೇ ಯೆಹೋವನು ಹೀಗೆ ಹೇಳುತ್ತಾನೆ: “ನೋಡಿ, ನಾನು ಈ ಕುಟುಂಬದ ವಿರುದ್ಧವಾಗಿ ಸಂಕಟ ತರಲು ಯೋಚಿಸುತ್ತಿದ್ದೇನೆ. ನಿನ್ನನ್ನು ನೀನು ರಕ್ಷಿಸಲು ಸಾಧ್ಯವಿರುವುದಿಲ್ಲ. ಭಯಂಕರ ದಿವಸಗಳು ಬರುವದರಿಂದ ನೀನು ಉಬ್ಬಿಕೊಳ್ಳುವುದನ್ನು ನಿಲ್ಲಿಸುವೆ.


“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ಯೋವಾಷನು ಇಸ್ರೇಲಿನ ಅರಸನಾಗಿದ್ದನು. ಅವನು, “ಲೆಬನೋನಿನ ಒಂದು ಚಿಕ್ಕ ಮುಳ್ಳುಗಿಡವು ಲೆಬನೋನಿನ ದೇವದಾರು ಮರಕ್ಕೆ ಸಂದೇಶವನ್ನು ಕಳುಹಿಸಿತು. ಮುಳ್ಳುಗಿಡವು ಹೀಗೆ ಹೇಳಿತು: ‘ನಿನ್ನ ಮಗಳು ನನ್ನ ಮಗನನ್ನು ಮದುವೆ ಮಾಡಿಕೊಳ್ಳಲಿ.’ ಆದರೆ ಒಂದು ಕಾಡುಮೃಗ ಬಂದು ಮುಳ್ಳುಗಿಡವನ್ನು ತುಳಿದು ನಾಶಮಾಡಿತು.


ಇಸ್ರೇಲಿನ ರಾಜನಾದ ಅಹಾಬನು ಯೆಹೋಷಾಫಾಟನಿಗೆ, “ಮೀಕಾಯೆಹುವು ನನ್ನ ಬಗ್ಗೆ ಯೆಹೋವನಿಂದ ಒಳ್ಳೆಯ ಸಂದೇಶವನ್ನು ಕೊಡುವದೇ ಇಲ್ಲವೆಂದು ನಿನಗೆ ಹೇಳಿದೆನಲ್ಲಾ? ಅವನಲ್ಲಿ ನನ್ನ ವಿಷಯವಾಗಿ ಕೆಟ್ಟ ಸಂದೇಶವೇ ಇರುವದು” ಎಂದು ಹೇಳಿದನು.


ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.


ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.


ಅದಕ್ಕೆ ಆತ್ಮವು, ‘ನಾನು ಹೋಗಿ ಅಹಾಬನ ಪ್ರವಾದಿಗಳಿಗೆ ಸುಳ್ಳುಹೇಳುವ ಆತ್ಮವಾಗುತ್ತೇನೆ’ ಎಂದು ಹೇಳಿತು. ಅದಕ್ಕೆ ಆತನು ‘ಸರಿ, ಹಾಗೆಯೇ ಮಾಡು. ನೀನು ನಿನ್ನ ಕಾರ್ಯದಲ್ಲಿ ಸಫಲವಾಗುವೆ’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು