Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:24 - ಪರಿಶುದ್ದ ಬೈಬಲ್‌

24 ಮೀಕಾಯೆಹುವು, “ಚಿದ್ಕೀಯನೇ, ನೀನು ಒಳಕೋಣೆಯೊಳಗೆ ಅವಿತು ಕುಳಿತಿರುವ ದಿನದಲ್ಲಿ ನಿನಗೆ ತಿಳಿಯುವದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ಅಡಗಿಕೊಳ್ಳುವದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವದು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:24
8 ತಿಳಿವುಗಳ ಹೋಲಿಕೆ  

ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’”


ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ಆ ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು.


ಆಗ ಚಿದ್ಕೀಯನು ಮುಂದೆ ಬಂದು ಮೀಕಾಯೆಹುವಿನ ಕೆನ್ನೆಗೆ ಹೊಡೆದು, “ಮೀಕಾಯೆಹುವೇ, ಯೆಹೋವನ ಆತ್ಮನು ನಿನ್ನೊಂದಿಗೆ ಮಾತಾಡಲು ನನ್ನ ಬಳಿಯಿಂದ ಬಂದಾಗ ಯಾವ ಕಡೆಗೆ ಹೋದನು?” ಎಂದು ಗೇಲಿಮಾಡಿದಾಗ,


ಆಗ ಅರಸನಾದ ಅಹಾಬನು, ಮೀಕಾಯೆಹುವನ್ನು ತೆಗೆದುಕೊಂಡು ನಗರಪಾಲಕನಾದ ಅಮೋನನಿಗೂ ಮತ್ತು ರಾಜಕುಮಾರನಾದ ಯೋವಾಷನಿಗೂ ಕೊಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು