Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:27 - ಪರಿಶುದ್ದ ಬೈಬಲ್‌

27 ಆಗ ಮೀಕಾಯೆಹುವು, “ಅಹಾಬನೇ, ನೀನು ರಣರಂಗದಿಂದ ಸುರಕ್ಷಿತವಾಗಿ ಬಂದರೆ ಯೆಹೋವನು ನನ್ನ ಮೂಲಕ ಮಾತನಾಡಲಿಲ್ಲವೆಂದು ತಿಳಿದುಕೋ. ಜನರೇ, ನನ್ನ ಮಾತನ್ನು ಕೇಳಿ ನೆನಪಿನಲ್ಲಿಡಿರಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ, ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮೀಕಾಯೆಹುವು ಅರಸನಿಗೆ - ನೀನು ಸುರಕ್ಷಿತನಾಗಿ ಬರುವದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲ ಎಂದು ಹೇಳಿ - ಎಲ್ಲಾ ಜನರೇ, ಇದನ್ನು ಕೇಳಿರಿ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ, ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:27
9 ತಿಳಿವುಗಳ ಹೋಲಿಕೆ  

ಯೇಸು ಜನರನ್ನು ಮತ್ತೆ ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಪ್ರತಿಯೊಬ್ಬರು ಕೇಳಿರಿ ಮತ್ತು ಅರ್ಥಮಾಡಿಕೊಳ್ಳಿರಿ.


ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ.


ನನಗೆ ಕಿವಿಗೊಡುವ ಜನರೇ, ಲಾಲಿಸಿರಿ!”


ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.


“ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ: ‘ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.’ ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.”


ಇಲ್ಲಿರುವ ಜನರು ಸಾಯುವರು. ಆದರೆ ಇವರ ಅಂತ್ಯವು ಎಲ್ಲರಿಗೂ ಸಂಭವಿಸುವ ಅಂತ್ಯವಾಗಿದ್ದರೆ, ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.


ಇಸ್ರೇಲಿನ ರಾಜನಾದ ಅಹಾಬನೂ ಯೆಹೂದದ ರಾಜನಾದ ಯೆಹೋಷಾಫಾಟನೂ ರಾಮೋತ್‌ಗಿಲ್ಯಾದ್ ಪಟ್ಟಣದ ಮೇಲೆ ಧಾಳಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು