Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:31 - ಪರಿಶುದ್ದ ಬೈಬಲ್‌

31 ರಥಾಧಿಪತಿಗಳು ಯೆಹೋಷಾಫಾಟನನ್ನು ನೋಡಿದಾಗ ಅವನೇ ಅಹಾಬನೆಂದೆಣಿಸಿ ಅವನ ಮೇಲೆ ದಾಳಿ ನಡೆಸಿದರು. ಆದರೆ ಯೆಹೋಷಾಫಾಟನು ಗಟ್ಟಿಯಾಗಿ ಕೂಗಿಕೊಂಡನು. ಆಗ ಯೆಹೋವನು ಅವನಿಗೆ ಸಹಾಯಮಾಡಿ ರಥಾಧಿಪತಿಗಳು ಅವನಿಂದ ಬೇರೆ ಕಡೆಗೆ ತಿರುಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ದೇವರಾದ ಯೆಹೋವನು ಅವನಿಗೆ ನೆರವಾಗಿ ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:31
21 ತಿಳಿವುಗಳ ಹೋಲಿಕೆ  

ಅಬೀಯನ ಸೈನ್ಯವು ಸುತ್ತಲೂ ನೋಡಿದಾಗ ವೈರಿಗಳ ಸೈನ್ಯವು ಮುಂದೆಯೂ ಹಿಂದೆಯೂ ಯುದ್ಧಮಾಡುತ್ತಿರುವದನ್ನು ನೋಡಿ ಯೆಹೋವನನ್ನು ಕೂಗಿದರು. ಯಾಜಕರು ತುತ್ತೂರಿಯನ್ನೂದಿದರು.


ಶತ್ರುಗಳು ನನ್ನ ಮೇಲೆ ಆಕ್ರಮಣ ಮಾಡಿ ಸಂಪೂರ್ಣವಾಗಿ ನಾಶಮಾಡಲಿದ್ದರು. ಆದರೆ ಯೆಹೋವನು ನನಗೆ ಸಹಾಯ ಮಾಡಿದನು.


ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಯೆಹೋವನು ನನಗೆ ಸಹಾಯಮಾಡಿಲ್ಲದಿದ್ದರೆ, ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.


ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.


ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.


ಫರೋಹನೂ ಅವನ ಸೈನ್ಯವೂ ತಮ್ಮ ಕಡೆಗೆ ಬರುತ್ತಿರುವುದನ್ನು ಇಸ್ರೇಲರು ಕಂಡು ಬಹಳ ಭಯಪಟ್ಟರು. ಅವರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು.


ಆಗ ಅಬೀಯನ ಸೈನ್ಯದವರು ದೊಡ್ಡ ಆರ್ಭಟ ಮಾಡಿದರು. ಆರ್ಭಟಿಸುತ್ತಾ ಮುಂದೆ ಸಾಗಿದರು. ಯಾರೊಬ್ಬಾಮನ ಸೈನ್ಯವನ್ನು ಮತ್ತು ಎಲ್ಲಾ ಇಸ್ರೇಲರನ್ನು ಯೆಹೂದದ ಅಬೀಯನ ಸೈನ್ಯವು ಸೋಲಿಸುವಂತೆ ದೇವರು ಮಾಡಿದನು.


ಅರಾಮ್ಯರ ರಾಜನು ತನ್ನ ರಥದ ಅಧಿಪತಿಗಳಿಗೆ, “ನೀವು ಜನರೊಂದಿಗೆ ಯುದ್ಧಮಾಡಬೇಡಿರಿ, ಅಧಿಕಾರಿಗಳ ಮತ್ತು ಸಾಮಾನ್ಯ ಸೈನಿಕರ ಗೊಡವೆಗೆ ಹೋಗಬೇಡಿರಿ. ಆದರೆ ನೀವು ಇಸ್ರೇಲಿನ ರಾಜನಾದ ಅಹಾಬನೊಂದಿಗೇ ಯುದ್ಧಮಾಡಿರಿ” ಎಂದು ಹೇಳಿದನು.


ಯೆಹೋಷಾಫಾಟನು ಇಸ್ರೇಲಿನ ರಾಜನಲ್ಲವೆಂದು ಅವರು ತಿಳಿದು ಅವನ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸಿದರು.


ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.


ನಾನು ದೇವರನ್ನು ಆತನ ವಾಗ್ದಾನಕ್ಕಾಗಿ ಕೊಂಡಾಡುವೆನು. ಯೆಹೋವನು ನನಗೆ ಮಾಡಿರುವ ವಾಗ್ದಾನಕ್ಕಾಗಿ ನಾನು ಆತನನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು