Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:34 - ಪರಿಶುದ್ದ ಬೈಬಲ್‌

34 ಆ ದಿವಸ ಯುದ್ಧವು ಬಲುಘೋರವಾಗಿ ನಡೆಯಿತು. ಅಹಾಬನು ರಥದ ಕಂಬಕ್ಕೆ ಒರಗಿ ಸಂಜೆಯ ತನಕ ಹಾಗೆಯೇ ಅರಾಮ್ಯರ ಎದುರು ನಿಂತುಕೊಂಡಿದ್ದನು. ಸೂರ್ಯಾಸ್ತಮಾನವಾದಾಗ ಅಹಾಬನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಇಸ್ರಯೇಲರ ಅರಸನು ಸಾಯಂಕಾಲದವರೆಗೂ ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು.ಸೂರ್ಯಾಸ್ತಮಾನವಾದಾಗ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆದರೂ ಆ ದಿವಸ ಯುದ್ಧವು ಬಹು ಘೋರವಾಗಿದ್ದದರಿಂದ ಇಸ್ರಾಯೇಲ್ಯರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿದ್ದು ಸೂರ್ಯಾಸ್ತಮಾನವಾದಾಗ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನಾದ ಅಹಾಬನು ಸಾಯಂಕಾಲದವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು, ಸೂರ್ಯನು ಅಸ್ತಮಿಸಿದಾಗ ಅವನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:34
8 ತಿಳಿವುಗಳ ಹೋಲಿಕೆ  

ಕೊಲೆಮಾಡಿದ ಅಪರಾಧಿಯು ತನ್ನ ಸಮಾಧಿಗೆ ಓಡಿಹೋಗಲಿ. ಅವನಿಗೆ ಸಹಾಯಮಾಡಬೇಡ.


ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಸಜ್ಜನರಿಗಾದರೋ ಒಳ್ಳೆಯದೇ ಆಗುತ್ತದೆ.


ಆಗ ಮೀಕಾಯೆಹುವು, “ಅಹಾಬನೇ, ನೀನು ರಣರಂಗದಿಂದ ಸುರಕ್ಷಿತವಾಗಿ ಬಂದರೆ ಯೆಹೋವನು ನನ್ನ ಮೂಲಕ ಮಾತನಾಡಲಿಲ್ಲವೆಂದು ತಿಳಿದುಕೋ. ಜನರೇ, ನನ್ನ ಮಾತನ್ನು ಕೇಳಿ ನೆನಪಿನಲ್ಲಿಡಿರಿ” ಎಂದು ಉತ್ತರಕೊಟ್ಟನು.


‘ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಮಾಡಲು ಅಹಾಬನನ್ನು ಯಾರು ಮರುಳುಗೊಳಿಸುವರು? ಯಾಕೆಂದರೆ ಅಲ್ಲಿ ಅವನು ಸಾಯಬೇಕು’ ಎಂದು ಯೆಹೋವನು ಕೇಳಿದಾಗ ಅಲ್ಲಿ ನಿಂತಿದ್ದವರು ಬೇರೆಬೇರೆ ವಿಧಾನವನ್ನು ತಿಳಿಸಿದರು.


“ಇಸ್ರೇಲಿನ ಜನರೆಲ್ಲರೂ ಬೆಟ್ಟಪ್ರದೇಶಗಳಲ್ಲಿ ಚದರಿರುವದನ್ನು ಕಂಡೆನು. ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಕರ್ತನು ಹೇಳಿದ್ದೇನೆಂದರೆ, ‘ಅವರಿಗೆ ನಾಯಕರಿಲ್ಲ, ಆದ್ದರಿಂದ ಸುರಕ್ಷಿತವಾಗಿ ಮನೆಗೆ ಹಿಂದಿರುಗಲಿ’” ಎಂದು ಹೇಳಿದನು.


ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.


ಆದರೆ ಒಬ್ಬ ಸಿಪಾಯಿಯು ಬಿಲ್ಲು ತೆಗೆದು ಬಾಣವನ್ನು ಹೂಡಿ ಗುರಿಯಿಲ್ಲದೆ ಹೊಡೆದಾಗ ಆ ಬಾಣವು ಬಂದು ಇಸ್ರೇಲರ ರಾಜನಾದ ಅಹಾಬನಿಗೆ ತಾಗಿತು. ಅವನ ಕವಚದ ಸಂದಿನಿಂದ ಅವನ ದೇಹದೊಳಗೆ ಹೊಕ್ಕಿತು. ಆಗ ಅವನು ತನ್ನ ರಥವನ್ನೋಡಿಸುವ ರಾಹುತನಿಗೆ, “ರಥವನ್ನು ಹಿಂದಕ್ಕೆ ತಿರುಗಿಸಿ ನನ್ನನ್ನು ರಣರಂಗದಿಂದ ಹೊರಕ್ಕೆ ಕರೆದುಕೊಂಡು ಹೋಗು. ನಾನು ಗಾಯಗೊಂಡಿದ್ದೇನೆ” ಅಂದನು.


ಯೆಹೂದದ ರಾಜನಾದ ಯೆಹೋಷಾಫಾಟನು ಜೆರುಸಲೇಮಿನಲ್ಲಿದ್ದ ತನ್ನ ಮನೆಗೆ ಸುರಕ್ಷಿತವಾಗಿ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು