2 ಪೂರ್ವಕಾಲ ವೃತ್ತಾಂತ 18:8 - ಪರಿಶುದ್ದ ಬೈಬಲ್8 ಆಗ ಅಹಾಬನು ತನ್ನ ಸೇವಕರಲ್ಲೊಬ್ಬನನ್ನು ಕರೆದು, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಇಸ್ರಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಬೇಗ ಹೋಗಿ ಇಮ್ಲನ ಮಗ ಮೀಕಾಯೆಹುವನ್ನು ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ - ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು. ಅಧ್ಯಾಯವನ್ನು ನೋಡಿ |
ದಾವೀದನು ತನ್ನ ರಾಜ್ಯದಲ್ಲಿದ್ದ ಎಲ್ಲಾ ನಾಯಕರನ್ನು ಅಂದರೆ ಕುಲಪ್ರಧಾನರನ್ನು, ಪ್ರಧಾನಸೇನಾಧಿಪತಿಗಳನ್ನು, ಮಹಾಸೇನಾಧಿಪತಿಗಳನ್ನು ಮತ್ತು ಸೇನಾಧಿಪತಿಗಳನ್ನು, ರಾಜನಿಗೂ ಅವನ ಗಂಡುಮಕ್ಕಳಿಗೂ ಸೇರಿದ ಆಸ್ತಿಯನ್ನು ಮತ್ತು ಪಶುಗಳನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿಗಳನ್ನು; ರಾಜನ ಪ್ರಮುಖ ಅಧಿಕಾರಿಗಳನ್ನು; ಬಲಿಷ್ಠ ಯುದ್ಧವೀರರನ್ನು ಮತ್ತು ಧೈರ್ಯವಂತರಾದ ಸೈನಿಕರನ್ನು ಜೆರುಸಲೇಮಿಗೆ ಕರೆಸಿ ಸಭೆಸೇರಿಸಿದನು.
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.