Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:11 - ಪರಿಶುದ್ದ ಬೈಬಲ್‌

11 “ಅಮರ್ಯನು ನಿಮ್ಮ ಪ್ರಧಾನಯಾಜಕನು. ಯೆಹೋವನ ಕಾರ್ಯಗಳಿಗೆಲ್ಲಾ ಅವನೇ ನಿಮಗೆ ಪ್ರಮುಖನು. ಯೆಹೋವನ ಕುರಿತಾದ ಸಂಗತಿಗಳ ಬಗ್ಗೆ ಜೆಬದ್ಯನು ಪ್ರಮುಖನಾಗಿರುವನು. ಅವನು ಯೆಹೂದ ಕುಲದ ಇಷ್ಮಾಯೇಲನ ಮಗ. ಲೇವಿಯರು ನಿಮಗಾಗಿ ಬರವಣಿಗೆಯ ಕೆಲಸವನ್ನು ಮಾಡುವರು. ನೀವು ಮಾಡುವ ಕಾರ್ಯಗಳಲ್ಲಿ ಧೈರ್ಯಶಾಲಿಗಳಾಗಿರಿ. ಯೆಹೋವನು ನೀತಿವಂತರೊಂದಿಗಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಗೋ, ಯೆಹೋವನ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯಕಾರ್ಯ ಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದಕುಲಪ್ರಭುವೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನ ಲೇಖಕರು; ಧೈರ್ಯದಿಂದ ಕೆಲಸಮಾಡಿರಿ, ಯೆಹೋವನು ಸಜ್ಜನರ ಸಹಾಯಕನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:11
28 ತಿಳಿವುಗಳ ಹೋಲಿಕೆ  

ಜೆರುಸಲೇಮಿನೊಳಗೆ ಯೆಹೋಷಾಫಾಟನು ಲೇವಿಯರಲ್ಲಿ, ಯಾಜಕರಲ್ಲಿ ಮತ್ತು ಇಸ್ರೇಲರ ನಾಯಕರಲ್ಲಿ ಕೆಲವರನ್ನು ನ್ಯಾಯಾಧಿಪತಿಗಳನ್ನಾಗಿ ಆರಿಸಿದನು. ಇವರು ಜನರ ಜಗಳಗಳನ್ನು ಮತ್ತು ಸಮಸ್ಯೆಗಳನ್ನು ಯೆಹೋವನ ಕಟ್ಟಳೆಗಳ ಪ್ರಕಾರ ತೀರಿಸಬೇಕಾಗಿತ್ತು.


ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕನಾಗಿರುವ ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲ ಹೊಂದಿದವನಾಗು.


ಜಾಗರೂಕರಾಗಿರಿ, ನಂಬಿಕೆಯಲ್ಲಿ ದೃಢವಾಗಿರಿ. ಧೈರ್ಯದಿಂದಿರಿ ಮತ್ತು ಬಲಿಷ್ಠರಾಗಿರಿ.


ಅರಿಮಥಾಯ ಎಂಬುದು ಯೆಹೂದ್ಯರ ಒಂದು ಊರು. ಯೋಸೇಫನು ಇದರ ನಿವಾಸಿ. ಇವನು ಒಳ್ಳೆಯ ಧಾರ್ಮಿಕ ವ್ಯಕ್ತಿಯಾಗಿದ್ದನು. ದೇವರ ರಾಜ್ಯದ ಆಗಮನವನ್ನು ಇವನು ನಿರೀಕ್ಷಿಸಿದ್ದನು. ಯೋಸೇಫನು ಯೆಹೂದ್ಯರ ಹಿರಿಸಭೆಯ ಸದಸ್ಯನಾಗಿದ್ದನು. ಆದರೆ ಬೇರೆ ಯೆಹೂದ್ಯ ನಾಯಕರು ಯೇಸುವನ್ನು ಕೊಲ್ಲಲು ತೀರ್ಮಾನಿಸಿದಾಗ ಇವನು ಅದಕ್ಕೆ ಒಪ್ಪಲಿಲ್ಲ.


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ಯೆಹೋವನು ನೀತಿವಂತನನ್ನು ತನ್ನ ಮಾರ್ಗದಲ್ಲಿ ನಡೆಸುವನು ಮತ್ತು ಅವನನ್ನು ಮೆಚ್ಚಿಕೊಳ್ಳುವನು.


ಅವನು ಅವರಿಗೆ, “ನೀವು ಮಾಡುವ ಕಾರ್ಯದಲ್ಲಿ ಜಾಗರೂಕರಾಗಿರಿ. ನೀವು ಯೆಹೋವನ ಪರವಾಗಿ ಜನರ ನ್ಯಾಯವನ್ನು ತೀರಿಸುವವರಾಗಿದ್ದೀರಿ. ನೀವು ನ್ಯಾಯತೀರಿಸುವಾಗ ಯೆಹೋವನು ನಿಮ್ಮ ಸಂಗಡ ಇರುವನು.


ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.


ಹಷಬ್ಯನು ಹೆಬ್ರೋನ್ ಸಂತಾನದವನಾಗಿದ್ದನು. ಇವನೂ ಇವನ ಸಂಬಂಧಿಕರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ಯೆಹೋವನ ಸೇವೆಗೂ ಅರಸನ ಕಾರ್ಯಕ್ಕೂ ಅಧಿಕಾರಿಗಳಾಗಿದ್ದರು. ಹಷಬ್ಯನ ವರ್ಗದಲ್ಲಿ ಒಟ್ಟು ಒಂದು ಸಾವಿರದ ಏಳುನೂರು ಮಂದಿ ಸಾಮರ್ಥ್ಯಶಾಲಿಗಳಿದ್ದರು.


ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.


ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.


“ಮಗನೇ, ನೀನು ದೇವಾಲಯವನ್ನು ಕಟ್ಟುವಾಗ ಯೆಹೋವನು ನಿನ್ನ ಸಂಗಡವಿದ್ದು ನಿನಗೆ ಯಶಸ್ಸನ್ನು ದಯಪಾಲಿಸಲಿ.


ಅಜರ್ಯನ ಮಗನು ಅಮರ್ಯ. ಅಮರ್ಯನು ಅಹೀಟೂಬನ ತಂದೆ.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


“ಯೆಹೋಶುವನೇ, ನೀನು ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು; ಈ ಜನರು ತಮ್ಮ ದೇಶವನ್ನು ಪಡೆಯುವುದಕ್ಕೆ ನೀನು ಇವರ ಮುಂದಾಳಾಗಿ ನಡೆಸಬೇಕು. ನಾನು ಇವರಿಗೆ ಈ ಪ್ರದೇಶವನ್ನು ಕೊಡುವುದಾಗಿ ಇವರ ಪೂರ್ವಿಕರಿಗೆ ಪ್ರಮಾಣ ಮಾಡಿದ್ದೇನೆ.


ಯೆರೀಯನಿಗೆ ಎರಡು ಸಾವಿರದ ಏಳುನೂರು ಮಂದಿ ಸಂಬಂಧಿಕರಿದ್ದರು. ಇವರೆಲ್ಲಾ ಬಲಾಢ್ಯರೂ ಕುಟುಂಬಕ್ಕೆ ನಾಯಕರುಗಳೂ ಆಗಿದ್ದರು. ದಾವೀದನು ಇವರೆಲ್ಲರಿಗೂ ರೂಬೇನ್, ಗಾದ್, ಅರ್ಧಮನಸ್ಸೆಯವರ ಪ್ರಾಂತ್ಯಗಳಲ್ಲಿ ಯೆಹೋವನಿಗೆ ಸಂಬಂಧಿಸಿದ ಕಾರ್ಯಗಳನ್ನು, ರಾಜನಿಗೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ನೇಮಕ ಮಾಡಿದನು.


ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನೀವು ಶಕ್ತರಾಗಿರಿ, ನಿರಾಶರಾಗಬೇಡಿರಿ; ಯಾಕೆಂದರೆ ನಿಮ್ಮ ಒಳ್ಳೆಯ ಕೆಲಸಕ್ಕೆ ನಿಮಗೆ ಪ್ರತಿಫಲ ದೊರೆಯುವುದು.”


ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು