2 ಪೂರ್ವಕಾಲ ವೃತ್ತಾಂತ 19:2 - ಪರಿಶುದ್ದ ಬೈಬಲ್2 ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ. ಅಧ್ಯಾಯವನ್ನು ನೋಡಿ |
ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.
ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.
ನಿಮ್ಮ ಬಳಿಗೆ ಕೊಲೆಯ ಪ್ರಕರಣಗಳ ಬಗ್ಗೆ, ಕಟ್ಟಳೆಯ ಬಗ್ಗೆ, ಆಜ್ಞೆಯ ಬಗ್ಗೆ, ನಿಯಮದ ಬಗ್ಗೆ ಮತ್ತು ಬೇರೆ ಯಾವುದಾದರೂ ಕಟ್ಟಳೆಯ ಬಗ್ಗೆ ಬಗೆಹರಿಸಲು ಬರಬಹುದು. ಅವೆಲ್ಲಾ ನಿಮ್ಮ ಸಹೋದರರಿಂದಲೇ ಬರುವವು. ದೇವರಿಗೆ ವಿರುದ್ಧವಾಗಿ ಪಾಪಮಾಡಬಾರದೆಂಬುದಾಗಿ ಅವರಿಗೆಲ್ಲಾ ಎಚ್ಚರಿಸಬೇಕು. ನೀವು ನಂಬಿಗಸ್ತಿಕೆಯಿಂದ ಸೇವೆಮಾಡದಿದ್ದಲ್ಲಿ ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ದೇವರ ಕೋಪ ಉರಿಯುವಂತೆ ಮಾಡಿಕೊಳ್ಳುವಿರಿ. ನೀವು ತಪ್ಪಿತಸ್ಥರಾಗದೆ ನಂಬಿಗಸ್ತಿಕೆಯಿಂದ ಸೇವೆಮಾಡಿರಿ.
“ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.