2 ಪೂರ್ವಕಾಲ ವೃತ್ತಾಂತ 19:3 - ಪರಿಶುದ್ದ ಬೈಬಲ್3 ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು. ಅಧ್ಯಾಯವನ್ನು ನೋಡಿ |
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
ಆ ಬಳಿಕ ಯೇಹು ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವದನ್ನು ಕಂಡ ಯೇಹುವಿನ ಸಂಗಡಿಗರು ಅವನನ್ನು ಹಿಡಿದು ಯೇಹುವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. ಅವರು, “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.