2 ಪೂರ್ವಕಾಲ ವೃತ್ತಾಂತ 19:4 - ಪರಿಶುದ್ದ ಬೈಬಲ್4 ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಬೇರ್ಷೆಬ ನಗರದಿಂದ ಹಿಡಿದು ಎಫ್ರಾಯೀಮ್ ಬೆಟ್ಟದ ಪ್ರದೇಶದ ಜನರನ್ನೆಲ್ಲಾ ಸಂದರ್ಶಿಸಿದನು. ಯೆಹೋಷಾಫಾಟನು ಈ ಜನರನ್ನೆಲ್ಲ ಅವರ ಪೂರ್ವಿಕರ ದೇವರಾದ ಯೆಹೋವನ ಬಳಿಗೆ ಮತ್ತೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸವಾಗಿದ್ದು, ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಯಿಮ್ ಪರ್ವತದವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಜರ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋಷಾಫಾಟನು ಯೆರೂಸಲೇವಿುನಲ್ಲಿ ವಾಸವಾಗಿದ್ದು ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದವರೆಗೂ ಸಂಚರಿಸಿ ತನ್ನ ಪ್ರಜೆಗಳನ್ನು ಅವರ ಪಿತೃಗಳ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದನು. ಅವನು ತಿರುಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯೀಮನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಕಡೆಗೆ ಅವರನ್ನು ತಿರುಗಿಸಿದನು. ಅಧ್ಯಾಯವನ್ನು ನೋಡಿ |