Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:8 - ಪರಿಶುದ್ದ ಬೈಬಲ್‌

8 ಜೆರುಸಲೇಮಿನೊಳಗೆ ಯೆಹೋಷಾಫಾಟನು ಲೇವಿಯರಲ್ಲಿ, ಯಾಜಕರಲ್ಲಿ ಮತ್ತು ಇಸ್ರೇಲರ ನಾಯಕರಲ್ಲಿ ಕೆಲವರನ್ನು ನ್ಯಾಯಾಧಿಪತಿಗಳನ್ನಾಗಿ ಆರಿಸಿದನು. ಇವರು ಜನರ ಜಗಳಗಳನ್ನು ಮತ್ತು ಸಮಸ್ಯೆಗಳನ್ನು ಯೆಹೋವನ ಕಟ್ಟಳೆಗಳ ಪ್ರಕಾರ ತೀರಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದೊಡನೆ ಜೆರುಸಲೇಮಿಗೆ ಹಿಂದಿರುಗಿ ಬಂದು, ಲೇವಿಯರಿಂದ, ಯಾಜಕರ ಹಾಗು ಇಸ್ರಯೇಲ್ ಗೋತ್ರಪ್ರಧಾನರಿಂದ ಕೆಲವರನ್ನು ಆರಿಸಿ, ಸರ್ವೇಶ್ವರನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರ್ಪುನೀಡಲು ಜೆರುಸಲೇಮಿನಲ್ಲೇ ಇರಿಸಿದನು. ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇವಿುಗೆ ಹಿಂದಿರುಗಿ ಬಂದು ಲೇವಿಯರಿಂದಲೂ ಯಾಜಕರಿಂದಲೂ ಇಸ್ರಾಯೇಲ್‍ಗೋತ್ರ ಪ್ರಧಾನರಿಂದಲೂ ಕೆಲವರನ್ನು ಆರಿಸಿ ಯೆಹೋವ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವದಕ್ಕೋಸ್ಕರ ಯೆರೂಸಲೇವಿುನಲ್ಲಿ ಇರಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:8
11 ತಿಳಿವುಗಳ ಹೋಲಿಕೆ  

ಕೆನನ್ಯನು ಇಚ್ಹಾರ್ಯ ವಂಶದವನಾಗಿದ್ದನು. ಕೆನನ್ಯನೂ ಅವನ ಮಕ್ಕಳೂ ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ ಇಸ್ರೇಲಿನ ಅನೇಕ ಕಡೆಗಳಲ್ಲಿ ಕೆಲಸ ಮಾಡಿದರು.


ದಾವೀದನು, “ಇವರಲ್ಲಿ ಇಪ್ಪತ್ನಾಲ್ಕು ಸಾವಿರ ಮಂದಿ ಲೇವಿಯರು ದೇವಾಲಯದ ಕಟ್ಟಡದ ಮೇಲ್ವಿಚಾರಕರಾಗಿಯೂ ಆರು ಸಾವಿರ ಮಂದಿ ಲೇವಿಯರು ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ


“ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.


ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.


ಯೆಹೋಷಾಫಾಟನು ಅವರಿಗೆ, “ನೀವು ಹೃದಯಪೂರ್ವಕವಾಗಿ ನಿಮ್ಮ ಕೆಲಸ ನಡಿಸಬೇಕು. ನೀವು ಯೆಹೋವನಿಗೆ ಭಯಪಡುವವರಾಗಿರಬೇಕು.


“ಅಮರ್ಯನು ನಿಮ್ಮ ಪ್ರಧಾನಯಾಜಕನು. ಯೆಹೋವನ ಕಾರ್ಯಗಳಿಗೆಲ್ಲಾ ಅವನೇ ನಿಮಗೆ ಪ್ರಮುಖನು. ಯೆಹೋವನ ಕುರಿತಾದ ಸಂಗತಿಗಳ ಬಗ್ಗೆ ಜೆಬದ್ಯನು ಪ್ರಮುಖನಾಗಿರುವನು. ಅವನು ಯೆಹೂದ ಕುಲದ ಇಷ್ಮಾಯೇಲನ ಮಗ. ಲೇವಿಯರು ನಿಮಗಾಗಿ ಬರವಣಿಗೆಯ ಕೆಲಸವನ್ನು ಮಾಡುವರು. ನೀವು ಮಾಡುವ ಕಾರ್ಯಗಳಲ್ಲಿ ಧೈರ್ಯಶಾಲಿಗಳಾಗಿರಿ. ಯೆಹೋವನು ನೀತಿವಂತರೊಂದಿಗಿರುವನು” ಎಂದು ಹೇಳಿದನು.


ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು.


ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧಿಶರಾಗಿ ಯಾಜಕರು ಸೇವೆಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ವಿಧಿನಿಯಮಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು ಸಬ್ಬತ್ ದಿನಗಳನ್ನು ಅವರು ಗೌರವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು