Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:11 - ಪರಿಶುದ್ದ ಬೈಬಲ್‌

11 ಅದಕ್ಕೆ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ಹೀಗೆ ಉತ್ತರಿಸಿದನು: “ಸೊಲೊಮೋನನೇ, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಆದ್ದರಿಂದಲೇ ನಿನ್ನನ್ನು ಅವರ ಅರಸನನ್ನಾಗಿ ಆರಿಸಿಕೊಂಡಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತೂರಿನ ಅರಸನಾದ ಹೂರಾಮನು ಸೊಲೊಮೋನನಿಗೆ ಪತ್ರದ ಮೂಲಕ ತನ್ನ ಒಪ್ಪಿಗೆ ಸೂಚಿಸಿದನು. “ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವುದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇಮಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಟೈರಿನ ಅರಸ ಹೂರಾಮನು ಪತ್ರದ ಮೂಲಕ ಸೊಲೊಮೋನನಿಗೆ, “ಸರ್ವೇಶ್ವರ ತಮ್ಮ ಪ್ರಜೆಗಳನ್ನು ಪ್ರೀತಿಸುವವರು. ಆದುದರಿಂದ ನಿನ್ನನ್ನು ಆ ಜನರ ಅರಸನನ್ನಾಗಿ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತೂರಿನ ಅರಸನಾದ ಹೂರಾಮನು ಪತ್ರದ ಮೂಲಕವಾಗಿ ಸೊಲೊಮೋನನಿಗೆ - ಯೆಹೋವನು ತನ್ನ ಪ್ರಜೆಗಳನ್ನು ಪ್ರೀತಿಸುವವನಾಗಿರುವದರಿಂದ ನಿನ್ನನ್ನು ಅವರ ಅರಸನನ್ನಾಗಿ ನೇವಿುಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಟೈರಿನ ಅರಸನಾದ ಹೀರಾಮನು ಉತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿದನು: “ಯೆಹೋವ ದೇವರು ತಮ್ಮ ಜನರನ್ನು ಪ್ರೀತಿಮಾಡಿದ್ದರಿಂದ, ನಿನ್ನನ್ನು ಜನರ ಮೇಲೆ ಅರಸನನ್ನಾಗಿ ಮಾಡಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:11
6 ತಿಳಿವುಗಳ ಹೋಲಿಕೆ  

ನಿನ್ನ ದೇವರಿಗೆ ಸ್ತೋತ್ರವಾಗಲಿ. ಆತನು ನಿನ್ನಲ್ಲಿ ಸಂತೋಷಿಸಿ ತನ್ನ ಸಿಂಹಾಸನದಲ್ಲಿ ನಿನ್ನನ್ನು ಕುಳ್ಳಿರಿಸಿದ್ದಾನೆ. ನಿನ್ನ ದೇವರು ಇಸ್ರೇಲನ್ನು ಪ್ರೀತಿಸುತ್ತಾನೆ ಮತ್ತು ಶಾಶ್ವತವಾಗಿ ಪೋಷಿಸುತ್ತಾನೆ. ಅದಕ್ಕಾಗಿಯೇ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡುವುದಕ್ಕಾಗಿ ನಿನ್ನನ್ನು ಇಸ್ರೇಲಿನ ಅರಸನನ್ನಾಗಿ ಮಾಡಿದ್ದಾನೆ” ಎಂದು ಹೇಳಿದಳು.


ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.


ಅವನು ನಮ್ಮ ಜನರನ್ನು ಪ್ರೀತಿಸುತ್ತಾನೆ ಮತ್ತು ನಮಗೋಸ್ಕರ ಸಭಾಮಂದಿರವನ್ನು ಕಟ್ಟಿಸಿಕೊಟ್ಟಿದ್ದಾನೆ” ಎಂದು ಹೇಳಿ ಬಹಳವಾಗಿ ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು