2 ಪೂರ್ವಕಾಲ ವೃತ್ತಾಂತ 2:13 - ಪರಿಶುದ್ದ ಬೈಬಲ್13 ನಾನು ಹೂರಾಮಾಬೀ ಎಂಬ ಹೆಸರಿನ ಅನುಭವಶಾಲಿಯಾದ ಕುಶಲಕರ್ಮಿಯನ್ನು ನಿನಗೋಸ್ಕರ ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈಗ ನಾನು ಜ್ಞಾನಿಯು, ಕಲಾ ಪ್ರವೀಣನೂ ಆದ ಹೂರಾಮಾಬೀ ಎಂಬುವವನನ್ನು ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಈಗ ಜ್ಞಾನಿಯೂ ಕಲಾಪ್ರವೀಣನೂ ಆದ ಒಬ್ಬ ವ್ಯಕ್ತಿಯನ್ನು ಕಳುಹಿಸುತ್ತೇನೆ; ಇವನ ಹೆಸರು ಹೂರಾಮಾಬೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಈಗ ಜ್ಞಾನವಿವೇಕಗಳುಳ್ಳ ಪುರುಷನನ್ನು ಕಳುಹಿಸುತ್ತೇನೆ; ಅವನ ಹೆಸರು ಹೂರಾಮಾಬೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಈಗ ನಾನು ಜ್ಞಾನಿಯೂ, ಕಲಾ ಪ್ರವೀಣನೂ ಆದ ಹೂರಾಮ ಅಬೀ ಎಂಬ ಒಬ್ಬನನ್ನು ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿ |
ಅವನ ತಾಯಿಯು ದಾನ್ ಕುಟುಂಬದವಳು, ತಂದೆಯು ತೂರ್ ಪಟ್ಟಣದವನು. ಅವನು ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ ಇವುಗಳ ಕೆಲಸಗಳಲ್ಲಿ ತುಂಬ ಚತುರನು. ಅಲ್ಲದೆ ನೀಲಿ, ಕೆಂಪು ಧೂಮ್ರವರ್ಣದ ಬಟ್ಟೆಗಳನ್ನು ಮತ್ತು ಬೆಲೆಬಾಳುವ ಲಿನಿನ್ ಬಟ್ಟೆಗಳನ್ನು ನೇಯುವುದರಲ್ಲಿ ನಿಪುಣನಾಗಿದ್ದಾನೆ. ನೀನು ಏನೇ ಹೇಳಿದರೂ ಅವನು ಮಾಡಿಕೊಡುವನು. ನಿನ್ನ ಮತ್ತು ದಾವೀದನ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಕೆಲಸ ಮಾಡುವನು.