2 ಪೂರ್ವಕಾಲ ವೃತ್ತಾಂತ 2:16 - ಪರಿಶುದ್ದ ಬೈಬಲ್16 ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀನು ಅವುಗಳನ್ನು ಯೆರೂಸಲೇವಿುಗೆ ತರಿಸಿಕೊಳ್ಳಬಹುದು ಎಂಬದಾಗಿ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.” ಅಧ್ಯಾಯವನ್ನು ನೋಡಿ |
ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.