2 ಪೂರ್ವಕಾಲ ವೃತ್ತಾಂತ 2:3 - ಪರಿಶುದ್ದ ಬೈಬಲ್3 ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಅವನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೂರಾಮನಿಗೆ - ನನ್ನ ತಂದೆಯಾದ ದಾವೀದನು ತನ್ನ ವಾಸಕ್ಕೋಸ್ಕರ ಅರಮನೆಯನ್ನು ಕಟ್ಟಿಸಿಕೊಳ್ಳುವದಕ್ಕಾಗಿ ನೀನು ಅವನಿಗೆ ದೇವದಾರುಮರಗಳನ್ನು ಕಳುಹಿಸಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು. ಅಧ್ಯಾಯವನ್ನು ನೋಡಿ |
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.