8 ಅಲ್ಲದೆ ನನಗೆ ಲೆಬನೋನಿನಿಂದ ದೇವದಾರು, ತುರಾಯಿ ಮತ್ತು ಸುಗಂಧಮರಗಳನ್ನು ಕಳುಹಿಸಿಕೊಡು. ನಿನ್ನ ಸೇವಕರು ಲೆಬನೋನಿನ ಮರಗಳನ್ನು ಕತ್ತರಿಸುವುದರಲ್ಲಿ ನಿಪುಣರೆಂಬುದು ನನಗೆ ಗೊತ್ತಿದೆ. ನಿನ್ನ ಅನುಭವಸ್ಥ ಸೇವಕರಿಗೆ ಸಹಾಯ ಮಾಡಲು ನನ್ನ ಸೇವಕರೂ ಬರುವರು.
8 ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.
8 ಅಂತೆಯೇ ಲೆಬನೋನಿನಿಂದ ದೇವದಾರು ಮರವನ್ನೂ ತುರಾಯಿಮರವನ್ನೂ ಸುಗಂಧದ ಮರವನ್ನೂ ನನಗೆ ಕಳುಹಿಸಬೇಕು. ನಿನ್ನ ಆಳುಗಳು ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ಜಾಣರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಕೆಲಸಮಾಡುವರು.
8 ಮತ್ತು ಲೆಬನೋನಿನಿಂದ ದೇವದಾರುಮರವನ್ನೂ ತುರಾಯಿಮರವನ್ನೂ ಸುಗಂಧದಮರವನ್ನೂ ನನಗೆ ಕಳುಹಿಸಬೇಕು. ನಿನ್ನ ಆಳುಗಳು ಲೆಬನೋನಿನ ಮರಗಳನ್ನು ಕಡಿಯುವದರಲ್ಲಿ ಜಾಣರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.
8 “ನೀನು ಇಲ್ಲಿಗೆ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ಲೆಬನೋನಿನಿಂದ ನನ್ನ ಬಳಿಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವಕರು ನಿಪುಣರಾಗಿದ್ದಾರೆ. ನನ್ನ ಸೇವಕರು ಅವರ ಸಂಗಡ ಇರುವರು.
ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.
ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.