2 ಪೂರ್ವಕಾಲ ವೃತ್ತಾಂತ 20:10 - ಪರಿಶುದ್ದ ಬೈಬಲ್10 “ಈಗ ಅಮ್ಮೋನಿಯರೂ ಮೋವಾಬಿನವರೂ ಸೇಯೀರ್ ಬೆಟ್ಟಪ್ರದೇಶದವರೂ ನಮಗೆ ವಿರೋಧವಾಗಿ ಬಂದಿದ್ದಾರೆ. ಈಜಿಪ್ಟಿನಿಂದ ಇಸ್ರೇಲರು ಹೊರಬಂದಾಗ ಅವರ ದೇಶದೊಳಗಿಂದ ಪ್ರಯಾಣ ಮಾಡಲು ನೀನು ಬಿಡಲಿಲ್ಲ. ಆದ್ದರಿಂದ ಇಸ್ರೇಲರು ಅವರನ್ನು ನಾಶಮಾಡದೆ ಬೇರೆ ಕಡೆಗೆ ತಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಅಮ್ಮೋನಿಯರನ್ನು, ಮೋವಾಬ್ಯರನ್ನು ಹಾಗೂ ಸೇಯಿರ ಪರ್ವತಪ್ರದೇಶದವರನ್ನು ನೋಡಿರಿ; ಇಸ್ರಯೇಲರು ಈಜಿಪ್ಟ್ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿಮ್ಮಿಂದ ಅಪ್ಪಣೆ ಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲವೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತಪ್ರದೇಶದವರನ್ನೂ ನೋಡು; ಇಸ್ರಾಯೇಲ್ಯರು ಐಗುಪ್ತದೇಶದಿಂದ ಬರುತ್ತಿದ್ದಾಗ ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ ಇವರನ್ನು ಸಂಹರಿಸದೆ ವಾರೆಯಾಗಿ ಹೋದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು. ಅಧ್ಯಾಯವನ್ನು ನೋಡಿ |