2 ಪೂರ್ವಕಾಲ ವೃತ್ತಾಂತ 20:12 - ಪರಿಶುದ್ದ ಬೈಬಲ್12 ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು. ಅಧ್ಯಾಯವನ್ನು ನೋಡಿ |
ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.