Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:17 - ಪರಿಶುದ್ದ ಬೈಬಲ್‌

17 ನೀವು ಈ ಯುದ್ಧದಲ್ಲಿ ಹೋರಾಡುವ ಅವಶ್ಯವಿಲ್ಲ. ನಿಮ್ಮ ಸ್ಥಳಗಳಲ್ಲಿ ಸ್ಥಿರವಾಗಿ ನಿಂತುಕೊಂಡಿರಿ. ಯೆಹೋವನ ರಕ್ಷಣಾಕಾರ್ಯವನ್ನು ನೀವು ನೋಡುವಿರಿ. ಭಯಪಡಬೇಡಿರಿ; ಚಿಂತೆಗೊಳಗಾಗಬೇಡಿರಿ; ಯೆಹೋವನು ನಿಮ್ಮೊಂದಿಗಿದ್ದಾನೆ. ಆದ್ದರಿಂದ ನೀವು ನಾಳೆ ಹೋಗಿ ಆ ಸೈನ್ಯವನ್ನು ಎದುರಿಸಿರಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ಸಾರಿ ನೀವು ಯುದ್ಧಮಾಡುವದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇವಿುನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ನಡಿಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:17
26 ತಿಳಿವುಗಳ ಹೋಲಿಕೆ  

ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಅಶ್ಶೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು” ಎಂದು ಹೇಳಿ ಹಿಜ್ಕೀಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.


ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.


ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.


ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.


ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)


ದೇವರು ನಿಮ್ಮೊಂದಿಗಿದ್ದಾನೆಂದು ನೀವು ಹೇಳುತ್ತೀರಿ. ಆದ್ದರಿಂದ ನೀವು ಕೆಟ್ಟಕಾರ್ಯವನ್ನು ಮಾಡದೆ ಒಳ್ಳೆಯ ಕಾರ್ಯಗಳನ್ನು ಮಾಡಬೇಕು. ಆಗ ನೀವು ಬದುಕುವಿರಿ. ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಯಲ್ಲಿ ಖಂಡಿತವಾಗಿಯೂ ಇರುವನು.


ಪ್ರಭುವು ನಿನ್ನ ಆತ್ಮದ ಸಂಗಡ ಇರಲಿ. ಆತನ ಕೃಪೆಯು ನಿನ್ನೊಂದಿಗಿರಲಿ.


ಈಜಿಪ್ಟ್ ಯಾವ ಪ್ರಯೋಜನಕ್ಕೂ ಬಾರದು. ಅದರ ಸಹಾಯವು ಏನೂ ಅಲ್ಲ. ಅದಕ್ಕಾಗಿ ನಾನು ಈಜಿಪ್ಟನ್ನು “ಏನೂ ಮಾಡದ ದೈತ್ಯಾಕಾರದ ಮೃಗ” ಎಂದು ಕರೆಯುತ್ತೇನೆ.


ರಥಗಳ ಚಕ್ರಗಳು ನೆಲಕ್ಕೆ ಅಂಟಿಕೊಂಡವು. ರಥಗಳನ್ನು ನಡಿಸುವುದು ಬಹುಕಷ್ಟವಾಗಿತ್ತು. ಈಜಿಪ್ಟಿನವರು “ನಾವು ಇಲ್ಲಿಂದ ಹೋಗೋಣ. ಯೆಹೋವನು ಈಜಿಪ್ಟಿನ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ. ಯೆಹೋವನು ಇಸ್ರೇಲರಿಗಾಗಿ ಯುದ್ಧ ಮಾಡುತ್ತಿದ್ದಾನೆ” ಎಂದು ಕೂಗಿಕೊಂಡರು.


ನಾಳೆ ಅವರ ವಿರುದ್ಧವಾಗಿ ಹೊರಟು ಅವರೊಂದಿಗೆ ಹೋರಾಡಿ. ಅವರು ಹಜ್ಜೀಜ್ ಕಣಿವೆಯಿಂದ ಬರುವರು. ನೀವು ಅವರನ್ನು ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.


ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.


ಆ ಪ್ರಾಂತ್ಯದ ಅರಸುಗಳಿಗೆ ನೀನು ಹೆದರಬೇಡ. ನಿನ್ನ ದೇವರಾದ ಯೆಹೋವನು ನಿನಗಾಗಿ ಯುದ್ಧ ಮಾಡುವನು’ ಎಂದು ಹೇಳಿದೆನು.


ಗಿದ್ಯೋನನ ಜನರು ನಿಂತಲ್ಲಿಯೇ ನಿಂತುಕೊಂಡರು. ಮಿದ್ಯಾನ್ಯರು ಕೂಗಿಕೊಂಡು ಓಡಿಹೋಗಲು ಆರಂಭಿಸಿದರು.


ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.


ಅದೇ ಸಮಯಕ್ಕೆ ಒಬ್ಬ ಪ್ರವಾದಿಯು ರಾಜನಾದ ಅಹಾಬನ ಬಳಿಗೆ ಹೋಗಿ, “ರಾಜನಾದ ಅಹಾಬನೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ. ‘ಆ ಮಹಾಸೇನೆಯನ್ನು ನೀನು ನೋಡಿದೆಯಾ! ಯೆಹೋವನಾದ ನಾನು, ಈ ದಿನ ಆ ಸೇನೆಯನ್ನು ಸೋಲಿಸುವಂತೆ ನಿನಗೆ ಅವಕಾಶ ಮಾಡುತ್ತೇನೆ. ಅನಂತರ ನಾನೇ ಯೆಹೋವನೆಂಬುದು ನಿನಗೆ ತಿಳಿಯುತ್ತದೆ’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು