2 ಪೂರ್ವಕಾಲ ವೃತ್ತಾಂತ 20:20 - ಪರಿಶುದ್ದ ಬೈಬಲ್20 ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.