Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:21 - ಪರಿಶುದ್ದ ಬೈಬಲ್‌

21 ಯೆಹೋಷಾಫಾಟನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕೆಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಗೀತೆಯನ್ನು ಹಾಡಿದರು. ಆ ಗಾಯಕರು, “ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು” ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:21
21 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು!


ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು!


ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು.


ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ.


ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.


ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.


ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.


ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು. ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ; ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.


ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು.


ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು.


ಜ್ಞಾನದ ಮಾರ್ಗದರ್ಶನವಿಲ್ಲದ ದೇಶವು ಬಿದ್ದುಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು.


ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ.


ಇಸ್ರೇಲರು ಜೆರುಸಲೇಮಿನಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿವಸಗಳ ತನಕ ಆಚರಿಸಿದರು. ಅವರೆಲ್ಲಾ ಹರ್ಷದಿಂದ ತುಂಬಿ ಹಬ್ಬವನ್ನು ಆಚರಿಸಿದರು. ಯಾಜಕರೂ ಲೇವಿಯರೂ ಪ್ರತಿದಿನ ಗಟ್ಟಿಯಾಗಿ ಸ್ತುತಿಗೀತೆಗಳನ್ನು ಹಾಡಿದರು.


ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದುಕೊಂಡವು. ನಾಶಪ್ರವಾಹವು ನನ್ನನ್ನು ಪಾತಾಳಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು