2 ಪೂರ್ವಕಾಲ ವೃತ್ತಾಂತ 20:25 - ಪರಿಶುದ್ದ ಬೈಬಲ್25 ಯೆಹೋಷಾಫಾಟನೂ ಅವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋಷಾಫಾಟನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವುದಕ್ಕಾಗಿ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧ, ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟನ್ನೂ ಸುಲಿದುಕೊಂಡರು. ಕೊಳ್ಳೆಯ ಮೊತ್ತ ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವದಕ್ಕೋಸ್ಕರ ಅಲ್ಲಿಗೆ ಹೋಗಲು ಅವರಿಗೆ ದ್ರವ್ಯ ವಸ್ತ್ರ ಶ್ರೇಷ್ಠಾಯುಧ ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲುಕೊಂಡರು. ಕೊಳ್ಳೆಯು ಬಲುಹೆಚ್ಚಾಗಿದ್ದದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು. ಅಧ್ಯಾಯವನ್ನು ನೋಡಿ |
“ಪ್ರತಿಯೊಬ್ಬ ಇಬ್ರಿಯ ಸ್ತ್ರೀಯು ಈಜಿಪ್ಟಿನ ನೆರೆಯವರನ್ನಾಗಲಿ ಅಥವಾ ತನ್ನ ಮನೆಯಲ್ಲಿ ವಾಸಿಸುತ್ತಿರುವ ಯಾವುದೇ ಸ್ತ್ರೀಯನ್ನಾಗಲಿ ಕೇಳಿದರೆ ಅವರು ಆಕೆಗೆ ಉಡುಗೊರೆಗಳನ್ನು ಕೊಡುವರು. ನಿನ್ನ ಜನರು ಬೆಳ್ಳಿಬಂಗಾರಗಳನ್ನು, ಶ್ರೇಷ್ಠವಾದ ಬಟ್ಟೆಗಳನ್ನು ಪಡೆಯುವರು. ನೀವು ಈಜಿಪ್ಟನ್ನು ಬಿಡುವಾಗ ಆ ಉಡುಗೊರೆಗಳನ್ನು ನಿಮ್ಮ ಮಕ್ಕಳಿಗೆ ತೊಡಿಸುವಿರಿ. ಈ ರೀತಿಯಲ್ಲಿ ನೀವು ಈಜಿಪ್ಟಿನವರ ಐಶ್ವರ್ಯವನ್ನು ತೆಗೆದುಕೊಂಡು ಹೋಗುವಿರಿ” ಅಂದನು.