Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:26 - ಪರಿಶುದ್ದ ಬೈಬಲ್‌

26 ನಾಲ್ಕನೆಯ ದಿವಸದಲ್ಲಿ ಯೆಹೋಷಾಫಾಟನೂ ಅವನ ಸೈನ್ಯವೂ ಬೆರಾಕ ತಗ್ಗಿನಲ್ಲಿ ಬಂದು ಸೇರಿದರು. ಅಲ್ಲಿ ಯೆಹೋವನಿಗೆ ಸ್ತೋತ್ರ ಮಾಡಿದರು. ಆದ್ದರಿಂದ ಈ ದಿನದವರೆಗೂ ಅದಕ್ಕೆ ಬೆರಾಕ ತಗ್ಗು ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾಲ್ಕನೆಯ ದಿವಸದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡರು. ಅಲ್ಲಿ ಯೆಹೋವ ದೇವರನ್ನು ಸ್ತುತಿಸಿದರು. ಆದಕಾರಣ ಇಂದಿನವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:26
16 ತಿಳಿವುಗಳ ಹೋಲಿಕೆ  

“ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.


ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.


ಆ ಪೆಟ್ಟಿಗೆಯನ್ನು ಹೊರಲು ಜೋಡಿಸಿದ್ದ ಕೋಲುಗಳು ಉದ್ದವಾಗಿದ್ದ ಕಾರಣ ಅದರ ಕೊನೆಗಳು ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಕಾಣುತ್ತಿದ್ದವು. ಆದರೆ ದೇವಾಲಯದ ಹೊರಗಿನಿಂದ ಆ ಕೋಲುಗಳು ಯಾರಿಗೂ ಕಾಣುತ್ತಿರಲಿಲ್ಲ. ಇಂದಿಗೂ ಆ ಕೋಲುಗಳು ಅಲ್ಲಿಯೇ ಅವೆ.


ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು.


ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು.


ಯೆಹೋವನು ದಾವೀದನನ್ನು ಸೌಲನಿಂದ ಮತ್ತು ಅವನ ಇತರ ಎಲ್ಲಾ ಶತ್ರುಗಳಿಂದ ರಕ್ಷಿಸಿದನು. ಆ ಸಮಯದಲ್ಲಿ ದಾವೀದನು ಈ ಹಾಡನ್ನು ರಚಿಸಿ ಹಾಡಿದನು:


ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


ಇದರ ಬಗ್ಗೆ ಜೆರುಸಲೇಮಿನ ಜನರೆಲ್ಲರಿಗೂ ತಿಳಿಯಿತು. ಆದಕಾರಣವೇ ಅವರು ಆ ಹೊಲಕ್ಕೆ ಅಕೆಲ್ದಮಾ ಎಂದು ಹೆಸರಿಟ್ಟರು. ಅವರ ಭಾಷೆಯಲ್ಲಿ ಅಕೆಲ್ದಮಾ ಅಂದರೆ “ರಕ್ತದ ಹೊಲ” ಎಂದರ್ಥ.)


ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.


ಅವರ ನಾಯಕರು ಅಹೀಯೆಜೆರ್ ಮತ್ತು ಯೋವಾಷ್ (ಇವರಿಬ್ಬರೂ ಗಿಬೆಯದವನಾದ ಹಷ್ಷೆಮಾಹನ ಗಂಡುಮಕ್ಕಳು); ಅಜ್ಮಾವೆತನ ಗಂಡುಮಕ್ಕಳಾದ ಯೆಜೀಯೇಲ್ ಮತ್ತು ಪೆಲೆಟ; ಅನತೋತ್ ಊರಿನವರಾದ ಬೆರಾಕಾ ಮತ್ತು ಯೇಹು.


ಯೆಹೋಷಾಫಾಟನೂ ಅವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋಷಾಫಾಟನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು.


ತರುವಾಯ ಯೆಹೋಷಾಫಾಟನು ತನ್ನ ಸೈನ್ಯವನ್ನು ಜೆರುಸಲೇಮಿಗೆ ನಡಿಸಿದನು. ಶತ್ರುಗಳ ಮೇಲೆ ಯೆಹೋವನು ನೀಡಿದ ಜಯಕ್ಕಾಗಿ ಅವರು ಹರ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು