Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:28 - ಪರಿಶುದ್ದ ಬೈಬಲ್‌

28 ಅವರು ವಾದ್ಯಗಳನ್ನು ಬಾರಿಸುತ್ತಾ ದೇವಾಲಯವನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಜೆರುಸಲೇಮಿನಲ್ಲಿರುವ ಸರ್ವೇಶ್ವರನಾಲಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಸ್ವರಮಂಡಲ ಕಿನ್ನರಿ ತುತೂರಿ ಇವುಗಳೊಡನೆ ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:28
12 ತಿಳಿವುಗಳ ಹೋಲಿಕೆ  

ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ.


ನನ್ನ ಮನವೇ, ಎಚ್ಚರಗೊಳ್ಳು! ಹಾರ್ಪ್ ಮತ್ತು ಲೈರ್ ವಾದ್ಯಗಳೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಸೂರ್ಯೋದಯವನ್ನು ಎದುರುಗೊಳ್ಳೋಣ.


ಹೇಮಾನನು ತನ್ನ ಮಕ್ಕಳೆಲ್ಲರನ್ನು ದೇವಾಲಯದಲ್ಲಿ ಹಾಡುವದಕ್ಕಾಗಿ ಬಳಸಿಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು ಅವರನ್ನು ಆರಿಸಿಕೊಂಡನು.


ನಾಲ್ಕು ಸಾವಿರ ಮಂದಿ ಲೇವಿಯರು ದ್ವಾರಪಾಲಕರಾಗಿಯೂ ನಾಲ್ಕು ಸಾವಿರ ಮಂದಿ ಲೇವಿಯರು ಗಾಯಕರಾಗಿಯೂ ಸೇವೆ ಮಾಡಬೇಕು. ನಾನು ಅವರಿಗಾಗಿ ವಿಶೇಷ ವಾದ್ಯಗಳನ್ನು ತಯಾರಿಸಿಟ್ಟಿರುತ್ತೇನೆ. ಅವರು ಅವುಗಳನ್ನು ನುಡಿಸುತ್ತಾ ದೇವರಿಗೆ ಸ್ತೋತ್ರ ಮಾಡಬೇಕು” ಅಂದನು.


ದಾವೀದನೂ ಎಲ್ಲಾ ಇಸ್ರೇಲರೂ ದೇವರ ಮುಂದೆ ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಹೋದರು. ಹಾರ್ಪ್‌ವಾದ್ಯವನ್ನು, ಲೈರ್‌ವಾದ್ಯವನ್ನು, ತಬಲವನ್ನು, ತಾಳವನ್ನು ಮತ್ತು ತುತ್ತೂರಿಯನ್ನು ಬಾರಿಸುತ್ತಾ ಹಾಡುತ್ತಾ ದೇವರಿಗೆ ಸ್ತೋತ್ರ ಮಾಡಿದರು.


ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.


ತರುವಾಯ ಯೆಹೋಷಾಫಾಟನು ತನ್ನ ಸೈನ್ಯವನ್ನು ಜೆರುಸಲೇಮಿಗೆ ನಡಿಸಿದನು. ಶತ್ರುಗಳ ಮೇಲೆ ಯೆಹೋವನು ನೀಡಿದ ಜಯಕ್ಕಾಗಿ ಅವರು ಹರ್ಷಿಸಿದರು.


ಯೆಹೋವನು ಇಸ್ರೇಲರ ವೈರಿಗಳಿಗೆ ವಿರುದ್ಧವಾಗಿ ಯುದ್ಧ ಮಾಡಿದನೆಂದು ಕೇಳಿ ಎಲ್ಲಾ ದೇಶಗಳವರು ಆತನಿಗೆ ಭಯಪಟ್ಟರು.


ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ! ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು